ನನೆಗುದಿಗೆ ಬಿದ್ದಿದ್ದ ಗ್ರಾನೈಟ್ ಕಲ್ಲು ಗಣಿ ಗುತ್ತಿಗೆಗೆ ಮರುಚಾಲನೆ

ಬೆಂಗಳೂರು: ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ನನೆಗುದಿಗೆ ಬಿದ್ದಿದ್ದ ಗ್ರಾನೈಟ್ ಕಲ್ಲು ಗಣಿ ಗುತ್ತಿಗೆಯನ್ನು ಹರಾಜು ರಹಿತ ನೀಡಿದ್ದಾರೆ.
ತುಮಕೂರು ಜಿಲ್ಲೆ ಶಿರಾ ತಾಲ್ಲೂಕು,ಮದ್ದಕ್ಕನಹಳ್ಳಿ ಗ್ರಾಮದ ಮದ್ದಕ್ಕನಹಳ್ಳಿ ಕಲ್ಲು ಕುಟಿಗರ ಸಹಕಾರ ಸಂಘಕ್ಕೆ ( ಸರ್ವೆ ನಂ.12 12.20 ಎಕರೆ ) ಪ್ರದೇಶದಲ್ಲಿ ಗ್ರೇ ಗ್ರಾನೈಟ್ ಕಲ್ಲುಗಣಿ ನಡೆಸಲು ಸಚಿವ ಸಂಪುಟದಲ್ಲಿ ಅನುಮತಿ ನೀಡಲಾಗಿದೆ.ಇದರಿಂದಾಗಿ ಸುಮಾರು ಐದು ಸಾವಿರಕ್ಕೂ ಹೆಚ್ಚು ಮಂದಿಗೆ ಉದ್ಯೋಗ ಲಭಿಸಲಿದೆ. ಕಲ್ಲು ಕುಟಿಗರ ಸಹಕಾರ ಸಂಘಕ್ಕೆ ಸಾರ್ವಜನಿಕ ಹಿತದೃಷ್ಟಿಯಿಂದ (ಕರ್ನಾಟಕ ಉಪಖನಿಜ ರಿಯಾಯಿತಿ ನಿಯಮಗಳು, 1994ರ ನಿಯಮ 56ರಡಿ ವಿಶೇಷ ಪ್ರಕರಣವೆಂದು ಪರಿಗಣಿಸಿ) ಹರಾಜು ರಹಿತವಾಗಿ ಮಂಜೂರಾತಿ ಮಾಡಲು ಶುಕ್ರವಾರ ನಡೆದ ಸಂಪುಟ ಸಭೆ ಒಮ್ಮತದ ತೀರ್ಮಾನ ಕೈಗೊಂಡಿದೆ.
ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ನೊಂದಣಿ ಮಾಡಿಸಿಕೊಳ್ಳಲಾಗದ ಸ್ಥಿತಿಯಲ್ಲಿದ್ದ ಈ ಸಂಘಕ್ಕೆ ಹರಾಜು ರಹಿತವಾಗಿ ಮಂಜೂರು ನೀಡಲಾಗಿದ್ದು,ಈ ಪ್ರಸ್ತಾವನೆ ಹಲವು ವರ್ಷಗಳಿಂದ ಇಲಾಖೆಯ ಹಂತದಲ್ಲೇ ನನೆಗುದಿಗೆ ಬಿದ್ದಿತ್ತು.ಈ ಬಗ್ಗೆ ಸಚಿವರು ಅಧಿಕಾರಿಗಳು ಹಾಗೂ ಸಂಬಂಧಪಟ್ಟವರ ಜೊತೆಗೆ ಚರ್ಚೆಸಿ ಇದನ್ನು ಕಾರ್ಯರೂಪಕ್ಕೆ ತರಲಾಗಿದೆ.
ಸಂಘಕ್ಕೆ 1995 ರಿಂದ ಜಾರಿಗೆ ಬರುವಂತೆ 5 ವರ್ಷಗಳ ಅವಧಿಗೆ ಗಣಿ ಗುತ್ತಿಗೆಯನ್ನು ಮಂಜೂರು ಮಾಡಿ, ಪುನಃ 20 ವರ್ಷಗಳ ಅವಧಿಗೆ ನವೀಕರಿಸಲಾಗಿತ್ತು. ಇದಾದ ಬಳಿಕ ಸಂಘವು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಕಾರಣ ನಿಯಮದಂತೆ ನಾಲ್ಕು ತಿಂಗಳ ಅವಧಿಯೊಳಗೆ ನೋಂದಣಿ ಮಾಡಿಸಿಕೊಂಡಿರಲಿಲ್ಲ. ಈ ಕಾರಣದಿಂದಾಗಿ ಉಪನೋಂದಣಾಧಿಕಾರಿಗಳು 29.12.2015 ರಂದು ನೊಂದಣಿ ಮಾಡಲು ಅವಕಾಶವಿಲ್ಲವೆಂದು ಹೇಳಿದ್ದರು.
ಬಳಿಕ ನೋಂದಣಿ ಮಾಡಿಸಿಕೊಳ್ಳಲು ಸಂಘವು 29.12.2015 ರಂದು ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. ಸಂಘದ ಈ ಪ್ರಸ್ತಾವನೆಯ ಅಭಿಪ್ರಾಯ ಕೋರಿ ಕಾನೂನು ಇಲಾಖೆಗೆ ಸಲ್ಲಿಸಲಾಗಿತ್ತು. ನಂತರ ಕಾನೂನು ಇಲಾಖೆಯು ಗಣಿ ಮತ್ತು ಭೂವಿ ವಿಜ್ಞಾನ ಇಲಾಖೆಗೆ ಆಡಳಿತಾತ್ಮಕ ನಿರ್ಣಯ ಕೈಗೊಳ್ಳುವಂತೆ ಸಲಹೆ ನೀಡಿ, ಗಣಿ ಗುತ್ತಿಗೆಯನ್ನು ಈ ಸಂಘಕ್ಕೆನೀಡುವುದರಿಂದ ಆರ್ಥಿಕ ಹೊರಯಾಗುವುದಿಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು.

ಪ್ರಮುಖ ಸುದ್ದಿ :-   ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

ಪುನಃ ಗುತ್ತಿಗೆಯನ್ನು ಸಂಘಕ್ಕೆ ಮರು ಮಂಜೂರು ಮಾಡಲು ಅಂದಿನ ಸಚಿವರು ಸೂಚಿಸಿದ್ದರು. ಸಂಘವು 1995 ರಿಂದ ಸ್ವಾಧೀನಕ್ಕೆ ನೀಡಲು ಕೋರಿದ್ದು, ಆದರೆ ಹಿಂದಿನ ಸರ್ಕಾರದ ಪ್ರಧಾನ ಕಾರ್ಯದರ್ಶಿಯವರು ನಿಯಮಾವಳಿಗಳ ಪ್ರಕಾರ ಹಿಂದಿನ ದಿನಾಂಕದಿಂದ ಅನುಮತಿ ನೀಡಲು ಸಾಧ್ಯವಿಲ್ಲ ಎಂದಿದ್ದರು. ಆದರೆ 2017 ತಿದ್ದುಪಡಿ ನಿಯಮ ಜಾರಿಯಾದ ನಂತರ ಮರು ಮಂಜೂರಾತಿಗೆ ಅವಕಾಶವಿರುತ್ತದೆ. ಆದ್ದರಿಂದ ಈ ಗಣಿಗುತ್ತಿಗೆಯನ್ನು ರದ್ದುಪಡಿಸಿ ಹರಾಜು ಮೂಲಕ ವಿಲೇವಾರಿ ಮಾಡಲು ಟಿಪ್ಪಣಿ ಮಂಡಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಸಚಿವರ ಅಭಿಪ್ರಾಯ ಭಿನ್ನವಾಗಿದ್ದರಿಂದ ಕಡತವನ್ನು ಮುಂದಿನ ನಿರ್ಣಯಕ್ಕೆ ಮುಖ್ಯ ಕಾರ್ಯದರ್ಶಿಯವರಿಗೆ ಸಲ್ಲಿಸಲಾಗಿತ್ತು.
20-09-2018 ರ ಸಚಿವ ಸಂಪುಟ ಸಭೆಯ ಪ್ರಸ್ತಾವನೆಯನ್ನು ಪರಿಶೀಲಿಸಿ ಅಡ್ವೊಕೇಟ್ ಜನರಲ್‍ರವರು ದಿ.15-02-2019 ರಂದು ನೀಡಿದ ಅಭಿಪ್ರಾಯದಲ್ಲಿ ಈ ಕಲ್ಲುಗಣಿ ಗುತ್ತಿಗೆಯನ್ನು ಮರು ಮಂಜೂರು ಮಾಡಬಹುದಾಗಿ ತಿಳಿಸಿದ್ದಾರೆ. ಅದರಂತೆ
ಸಚಿವರು ಸಚಿವ ಸಂಪುಟ ಸಭೆಯಲ್ಲಿ ಇದನ್ನು ಮಂಡಿಸಿದ ನಂತರ ಗಣಿ ಗುತ್ತಿಗೆ ಮರು ಮಂಜೂರಾತಿ ಮಾಡಲು ತೀರ್ಮಾನಿಸಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement