ಕಾಳೇನಹಳ್ಳಿ ಗಣಿಪ್ರದೇಶ: ೨ ದಿನಗಳೊಳಗೆ ವರದಿಗೆ ನಿರಾಣಿ ಸೂಚನೆ

posted in: ರಾಜ್ಯ | 0

ಮಂಡ್ಯ:  ಶ್ರೀರಂಗಪಟ್ಟಣ ತಾಲ್ಲೂಕಿನ  ಕಾಳೇನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಗಣಿಪ್ರದೇಶದ ವಸ್ತುಸ್ಥಿತಿ ಕುರಿತಾಗಿ ಎರಡು ದಿನದೊಳಗೆ ಸಮಿತಿಯನ್ನು ರಚಿಸಿ ಸಮಗ್ರ ವರದಿ ನೀಡುವಂತೆ ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ಆರ್.ನಿರಾಣಿ ಅವರು ಅಧಿಕಾರಿಗಳಿಗೆ ಸೂಚನೆ ಕೊಟ್ಟರು.
ಸೋಮವಾರ ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದರಾದ ಸುಮಲತಾ ಅಂಬರೀಶ್  ಹಾಗೂ ಜಿಲ್ಲಾಧಿಕಾರಿ ಸೇರಿದಂತೆ ಇಲಾಖೆಯ ಅಧಿಕಾರಗಳ ಜೊತೆ ತಾಲ್ಲೂಕಿನ ಕಾಳೇನಹಳ್ಳಿ ಟಿ.ಎಂ‌.ಹೊಸೂರು ಸೇರಿದಂತೆ  ಸುತ್ತಮುತ್ತಲ ಸ್ಥಳಗಳಲ್ಲಿ  ಕಲ್ಲು ಗಣಿಗಾರಿಕೆ ಪರಿಶೀಲನೆ ನಡೆಸಿದರು.
ಬಳಿಕ ಸುದ್ದಿಗಾರರ ಜೊತೆ ಮಾತನಾಡಿ,ಕಂದಾಯ, ಅರಣ್ಯ, ಪರಿಸರ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಗಣಿ ಮತ್ತು ಭೂವಿಜ್ಞಾನ  ಇಲಾಖೆಯ ಸಹಭಾಗಿತ್ವದಲ್ಲಿ ಎರಡು ದಿನದೊಳಗೆ ಸಮಿತಿ ರಚನೆ ಮಾಡಿ ವರದಿ ನೀಡಲು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದರು.
ಈ ವರದಿ ಬಂದ ಬಳಿಕ ಏನೇನು ಕ್ರಮ ತೆಗೆದುಕೊಳ್ಳಬೇಕು ಎಂಬುದರ ಕುರಿತಾಗಿ ಪರಿಶೀಲಿಸಿ ನಂತರ ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಭರವಸೆ ನೀಡಿದರು.ಮುಂದಿನ ದಿನಗಳಲ್ಲಿ ‌ಜಿಲ್ಲೆಯಲ್ಲಿರುವ ಇನ್ನಷ್ಟು ಗಣಿಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಲಿದ್ದೇನೆ.
ಯಾವುದೇ ಸಮಸ್ಯೆಗಳಿದ್ದರೂ ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದೆಂದು‌ ಆಶ್ವಾಸನೆ ನೀಡಿದರು.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಇಂದಿನ ಪ್ರಮುಖ ಸುದ್ದಿ :-   ಕೆಎಸ್‌ಆರ್‌ಟಿಸಿ ನೂತನ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ : ಒಟ್ಟು ₹35,000 ಬಹುಮಾನ ಗೆಲ್ಲಿ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement