ಕೇರಳದಲ್ಲಿ ಮತ್ತೆ ಎಲ್‌ಡಿಎಫ್‌ ಸರಕಾರ ಅಧಿಕಾರಕ್ಕೆ: ಸಮೀಕ್ಷೆ

ಕೇರಳದಲ್ಲಿ ಪ್ರಸ್ತುತ ಚುನಾವಣೆ ನಡೆದರೆ ಸಿಪಿಎಂ ನೇತೃತ್ವದ ಲೆಫ್ಟ್‌ ಡೆಮಾಕ್ರಟಿಕ್‌ ಫ್ರಂಟ್‌ (ಎಲ್‌ಡಿಎಫ್)‌ ಸರಳ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಸಮೀಕ್ಷೆಯೊಂದು ತಿಳಿಸಿದೆ.
1980 ರಿಂದ ಈಚೆಗೆ ಯಾವುದೇ ಪಕ್ಷ ಅಥವಾ ಒಕ್ಕೂಟ ರಾಜ್ಯದಲ್ಲಿ ಸತತ ೨ ಬಾರಿ ಅಧಿಕಾರದ ಗದ್ದುಗೆ ಏರಿಲ್ಲ.
ಏಷ್ಯಾನೆಟ್ ನ್ಯೂಸ್-ಸಿಫೋರ್ ಸಮೀಕ್ಷೆಯ ಪ್ರಕಾರ, 140 ಸದಸ್ಯರ ವಿಧಾನಸಭೆಯಲ್ಲಿ ಎಲ್‌ಡಿಎಫ್ 72-78 ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದೆ. ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) 59-65 ಸ್ಥಾನಗಳನ್ನು ಗಳಿಸಬಹುದು. ಬಿಜೆಪಿ ನೇತೃತ್ವದ ನ್ಯಾಷನಲ್ ಡೆಮಾಕ್ರಟಿಕ್ ಅಲೈಯನ್ಸ್ (ಎನ್‌ಡಿಎ) 3-7 ಸ್ಥಾನಗಳೊಂದಿಗೆ ಮೂರನೇ ಸ್ಥಾನಕ್ಕೆ ಸಮಾಧಾನ ಪಟ್ಟುಕೊಳ್ಳಲಿದೆ.
ಉತ್ತರ ಮತ್ತು ದಕ್ಷಿಣ ಕೇರಳದಲ್ಲಿ ಯುಡಿಎಫ್ ಗಿಂತ ಎಲ್‌ಡಿಎಫ್‌ ಹೆಚ್ಚು ಸ್ಥಾನ ಗಳಿಸಲಿದೆ ಮತ್ತು ಯುಡಿಎಫ್ ರಾಜ್ಯದ ಮಧ್ಯ ಭಾಗಗಳಲ್ಲಿ ಪ್ರಬಲವಾಗಲಿದೆ ಎಂದು ಸಮೀಕ್ಷೆಯು ತಿಳಿಸಿದೆ.
ಸುಮಾರು 39% ರಷ್ಟು ಜನರು ಪಿಣರಾಯಿ ವಿಜಯನ್ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಮರಳಬೇಕೆಂದು ಬಯಸಿದ್ದಾರೆ. ಮಾಜಿ ಸಿಎಂ ಮತ್ತು ಕಾಂಗ್ರೆಸ್ ಮುಖಂಡ ಉಮ್ಮನ್ ಚಾಂಡಿ ಅವರನ್ನು 18% ಆಯ್ಕೆ ಮಾಡಿದ್ದಾರೆ. ಅವರ ಸಹೋದ್ಯೋಗಿ ಮತ್ತು ತಿರುವನಂತಪುರ ಸಂಸದ ಶಶಿ ತರೂರ್ ಅವರು 9% ಮತಗಳನ್ನು ಪಡೆದಿದ್ದಾರೆ. ಆರೋಗ್ಯ ಸಚಿವ ಕೆ.ಕೆ.ಶೈಲಜಾ 7% ಮತಗಳನ್ನು ಪಡೆದರೆ, ಕಾಂಗ್ರೆಸ್ ವಿರೋಧ ಪಕ್ಷದ ನಾಯಕ ರಮೇಶ್ ಚೆನ್ನಿಥಾಲಾ ಮತ್ತು ಬಿಜೆಪಿ ರಾಜ್ಯ ಅಧ್ಯಕ್ಷ ಕೆ.ಸುರೇಂದ್ರನ್ 6% ಮತಗಳನ್ನು ಪಡೆದಿದ್ದಾರೆ.
ಸಮೀಕ್ಷೆಯ ಪ್ರಕಾರ, ಶೇ. 34 ರಷ್ಟು ಜನರು ಕೋವಿಡ್ -19 ಲಾಕ್‌ಡೌನ್ ಸಮಯದಲ್ಲಿ ಉಚಿತ ಆಹಾರ ಕಿಟ್‌ಗಳನ್ನು ವಿತರಿಸುವುದೇ ಎಲ್‌ಡಿಎಫ್ ಸರ್ಕಾರದ ದೊಡ್ಡ ಸಾಧನೆ ಎಂದು ಹೇಳಿದ್ದಾರೆ. ಪ್ರತಿಕ್ರಿಯಿಸಿದವರಲ್ಲಿ ಶೇ. 27 ಜನರು ಕಲ್ಯಾಣ ಪಿಂಚಣಿಗೆ ಮತ ಚಲಾಯಿಸಿದ್ದಾರೆ ಮತ್ತು ಶೇ. 18 ಜನರು ಸರ್ಕಾರದ ಕೋವಿಡ್ -19 ನಿರ್ವಹಣೆಯನ್ನು ಶ್ಲಾಘಿಸಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೋ..| ಎರಡೂ ಕೈತೋಳುಗಳಿಲ್ಲದೆ ಡ್ರೈವಿಂಗ್‌ ಲೈಸೆನ್ಸ್‌ ಪಡೆದ ಏಷ್ಯಾದ ಮೊದಲ ಮಹಿಳೆ ಇವರು : ಕೇರಳದ ಯುವತಿಯ ಕಾರ್‌ ಚಾಲನೆಗೆ ಬೆರಗಾಗ್ತೀರಾ..!

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement