ಜೈ ಶ್ರೀರಾಮ ಘೋಷಣೆ ಕೂಗಿದ ಟಿಎಂಸಿ ಮುಖಂಡ

ತೃಣಮೂಲ ಕಾಂಗ್ರೆಸ್‌ ಮುಖಂಡ ಬ್ರಾತ್ಯ ಬಸು ಚುನಾವಣಾ ಪ್ರಚಾರ ಬಹಿರಂಗ ಸಭೆಯಲ್ಲಿ ಜೈ ಶ್ರೀರಾಮ್‌ ಎಂದು ಘೋಷಣೆ ಕೂಗಿ ಅಚ್ಚರಿ ಮೂಡಿಸಿದ್ದಾರೆ.

ನಾಡಿಯಾ ಜಿಲ್ಲೆಯ ಬಿರ್ನ್‌ ನಗರದಲ್ಲಿ ಟಿಎಂಸಿ ಮುಖಂಡ, ಖ್ಯಾತ ನಾಟಕಕಾರ, ಬರಹಗಾರ ಬಾತ್ಯ ಬಸು ಜೈ ಶ್ರೀರಾಮ್‌ ಎಂದು ಘೋಷಣೆ ಕೂಗಿದರು. ಆದರೆ ಅವರು ಟಿಎಂಸಿಗೆ ಮತ ನೀಡುವಂತೆ, ಮತ್ತೊಮ್ಮೆ ಮಮತಾ ಬ್ಯಾನರ್ಜಿಯನ್ನು ಮುಖ್ಯಮಂತ್ರಿ ಮಾಡುವಂತೆ, ಬಿಜೆಪಿಯನ್ನು ರಾಜ್ಯದಿಂದ ಓಡಿಸುವಂತೆ ಜನರಲ್ಲಿ ಮನವಿ ಮಾಡಿ ಜೈಶ್ರೀರಾಮ ಘೋಷಣೆ ಮಾಡಿದರು.

ಟಿಎಂಸಿ ಮುಖಂಡ ಜೈ ಶ್ರೀರಾಮ ಘೋಷಣೆ ಕೂಗಿದ್ದನ್ನು ಬಿಜೆಪಿ ಮುಖಂಡರು ಟೀಕಿಸಿದ್ದಾರೆ. ಚುನಾವಣಾ ಪ್ರಚಾರಕ್ಕೆ ಟಿಎಂಸಿಗೆ ರಾಮ ಅನಿವಾರ್ಯ ಎಂದು ಬಿಜೆಪಿ ರಾಜ್ಯ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ. ಆದರೆ ಶ್ರೀರಾಮನ ಮೇಲೆ ಬಿಜೆಪಿಯ ಹಕ್ಕುಸ್ವಾಮ್ಯವಿಲ್ಲ. ಶ್ರೀರಾಮ ನಮ್ಮ ಸಂಸ್ಕೃತಿಯಲ್ಲಿದೆ. ಯಾರು ಬೇಕಾದರೂ ಶ್ರೀರಾಮನ ಹೆಸರು ಹೇಳಬಹುದೆಂದು ಟಿಎಂಸಿ ನಾಯಕರು ಬಸು ಘೋಷಣೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಇತ್ತೀಚಿಗೆ ವಿಕ್ಟೋರಿಯಾ ಸ್ಮಾರಕದಲ್ಲಿ ನೇತಾಜಿ ಸುಭಾಸ್ ಚಂದ್ರ ಬೋಸ್ ಅವರ 125 ನೇ ಜನ್ಮದಿನಾಚರಣೆಯ ನೆನಪಿಗಾಗಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ವೇದಿಕೆಗೆ ಬಂದಾಗ, “ಜೈ ಶ್ರೀ ರಾಮ್” ಘೋಷಣೆಗಳನ್ನು ಸಾರ್ವಜನಿಕರು ಕೂಗಿದಾಗ ಕೋಪಗೊಂಡ ಮಮತಾಕ್ಕೆ ಭಾಷಣ ಮಾಡಲು ನಿರಾಕರಿಸಿದ್ದರು.

ಇಂದಿನ ಪ್ರಮುಖ ಸುದ್ದಿ :-   ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಕೆನಡಾದಲ್ಲಿ ಶಸ್ತ್ರಾಸ್ತ್ರ ತರಬೇತಿ ಶಿಬಿರ ನಡೆಸಿದ್ದ, ಭಾರತದಲ್ಲಿ ದಾಳಿ ನಡೆಸುವುದನ್ನು ಸಂಘಟಿಸಿದ್ದ : ವರದಿಗಳು

ಆದರೂ ಟಿಎಂಸಿ ಈಗ ತನ್ನ ಕಾರ್ಯತಂತ್ರವನ್ನು ಬದಲಾಯಿಸುತ್ತಿರುವುದು ಗೋಚರಿಸುತ್ತದೆ. ಮಮತಾ ಬ್ಯಾನರ್ಜಿಯ ಸೋದರಳಿಯ ಮತ್ತು ತೃಣಮೂಲ ನಾಯಕ ಅಭಿಷೇಕ್ ಬ್ಯಾನರ್ಜಿ ಕೂಡ “ಜೈ ಸಿಯಾ ರಾಮ್” ಎಂಬ ಘೋಷಣೆಯ ಮೂಲಕ ಬಿಜೆಪಿ ಹೋಗಬೇಕು ಎಂದು ಹೇಳಿದ್ದಾರೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement