ದೆಹಲಿ ದಂಗೆ ಹಿಂದೆ ಕಾಂಗ್ರೆಸ್‌, ಎಡ‌ ಪಕ್ಷಗಳ ಕೈವಾಡ: ಕಟೀಲು

posted in: ರಾಜ್ಯ | 0

ಬೆಂಗಳೂರು: ದೆಹಲಿಯಲ್ಲಿ ಗಣರಾಜ್ಯೋತ್ಸವದಂದು ನಡೆದ ಹಿಂಸಾಚಾರದ ಹಿಂದೆ ದಲ್ಲಾಳಿಗಳನ್ನು ಬೆಂಬಲಿಸುವ ಕಾಂಗ್ರೆಸ್‌, ಕಮ್ಯುನಿಸ್ಟ್‌ ಪಕ್ಷ ಹಾಗೂ ದೇಶವಿರೋಧಿ ಖಲಿಸ್ತಾನಿ ಶಕ್ತಿಗಳಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ಕುಮಾರ ಕಟೀಲು‌ ಹೇಳಿದರು,
ಆದರೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಚಾರಕ್ಕಾಗಿ ದೆಹಲಿ ದಂಗೆಯ ಹಿಂದೆ ಬಿಜೆಪಿ ಒಳಸಂಚಿದೆ ಎಂದು ತಪ್ಪು ಮಾಹಿತಿ ನೀಡುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಖರ್ಗೆ ಅವರ ಸೋಲಿಗೆ ಅವರ ಪಕ್ಷದವರೇ ಕಾರಣ ಎಂದು ಕಾಂಗ್ರೆಸ್‌ ಪಕ್ಷದ ಸತ್ಯಶೋಧನಾ ಸಮಿತಿ ತಿಳಿಸಿದೆ. ಕಾಂಗ್ರೆಸ್‌ನಲ್ಲಿ ನಾಯಕರೇ ಇಲ್ಲದ ಸ್ಥಿತಿಯಿದೆ. ಕುಟುಂಬ ರಾಜಕಾರಣಕ್ಕೆ ಜೋತುಬಿದ್ದಿರುವ ಕಾಂಗ್ರೆಸ್‌ ಅನಿವಾರ್ಯವಾಗಿ ಖರ್ಗೆ ಅವರನ್ನು ರಾಜ್ಯ ಸಭೆಗೆ ಆಯ್ಕೆ ಮಾಡಿ ವಿರೋಧ ಪಕ್ಷದ ಮುಖಂಡನ ಸ್ಥಾನ ನೀಡಿದೆ. ಇದನ್ನು ಖರ್ಗೆ ಅರ್ಥ ಮಾಡಿಕೊಳ್ಳುವುದು ಒಳಿತು ಎಂದರು.
ದೆಹಲಿಯಲ್ಲಿ ಗಣರಾಜ್ಯೋತ್ಸವದ ದಿನದಂದು ದೊಡ್ಡ ಪ್ರಮಾಣದ ಹಿಂಸಾಚಾರ ನಡೆಯುವುದನ್ನು ಕಾಂಗ್ರೆಸ್ ಪಕ್ಷ ನಿರೀಕ್ಷಿಸಿತ್ತು. ಆ ಗಲಭೆ, ಆಗುವ ಹಾನಿಗೆ ಪೊಲೀಸರು ಮತ್ತು ಪೊಲೀಸ್ ವ್ಯವಸ್ಥೆಯನ್ನು ನಿಯಂತ್ರಿಸುವ ಕೇಂದ್ರ ಸರ್ಕಾರವೇ ಕಾರಣ ಎಂದು ದೂರುವ ಉದ್ದೇಶ ಕಾಂಗ್ರೆಸ್ ಪಕ್ಷಕ್ಕೆ ಇತ್ತು ಎಂಬುದು ಖರ್ಗೆ ಅವರ ಈ ಹೇಳಿಕೆಯಿಂದ ಸ್ಪಷ್ಟವಾಗಿದೆ ಎಂದು ಅವರು ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷವು ಒಳಜಗಳದ ಕಾರಣಕ್ಕಾಗಿ ಎಲ್ಲೆಡೆ ಸೋಲುತ್ತಿದೆ. ಆದರೂ ಕರ್ನಾಟಕದಲ್ಲಿ ಗೆದ್ದು ಅಧಿಕಾರಕ್ಕೇರುವ ಹಗಲುಗನಸು ಕಾಣುವುದನ್ನು ಆ ಪಕ್ಷದ ನಾಯಕರು ಇನ್ನೂ ಬಿಟ್ಟಿಲ್ಲ ಎಂದು ಅವರು ಹೇಳಿದ್ದಾರೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಇಂದಿನ ಪ್ರಮುಖ ಸುದ್ದಿ :-   ಕಾಂತಾರದ 'ವರಾಹರೂಪಂ' ಹಾಡಿನ ವಿವಾದ: ಥೈಕ್ಕುಡಂ ಬ್ರಿಜ್‌ ದಾವೆ ತಿರಸ್ಕರಿಸಿದ್ದ ಕೋಝಿಕ್ಕೋಡ್‌ ನ್ಯಾಯಾಲಯದ ಆದೇಶಕ್ಕೆ ಕೇರಳ ಹೈಕೋರ್ಟ್‌ ತಡೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

/ 5. ಒಟ್ಟು ವೋಟುಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement