ಪಂಚಮಸಾಲಿಗಳಿಗೆ ೨ಎ ಮೀಸಲು: ಫ್ರೀಡಂಪಾರ್ಕಿನಲ್ಲಿ ಸತ್ಯಾಗ್ರಹ

posted in: ರಾಜ್ಯ | 0

ಬೆಂಗಳೂರು: ಪಂಚಮಸಾಲಿ ಸಮಾಜವು 2ಎ ಮೀಸಲಾತಿಗಾಗಿ ನಡೆಸುತ್ತಿರುವ ಹೋರಾಟ ಮತ್ತಷ್ಟು ತೀವ್ರಗೊಂಡಿದೆ.
ಮಾರ್ಚ್ 4ರೊಳಗೆ 2ಎ ಮೀಸಲಾತಿ ನೀಡದಿದ್ದರೆ ಅಮರಣಾಂತ ಉಪವಾಸ ಕೈಗೊಳ್ಳುವುದಾಗಿ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿಗಳು ಎಚ್ಚರಿಕೆ ನೀಡಿದ್ದಾರೆ.
ಸೋಮವಾರದಿಂದ ಫ್ರೀಡಂಪಾರ್ಕ್‍ನಲ್ಲಿ ಸತ್ಯಾಗ್ರಹ ಆರಂಭಗೊಂಡಿದ್ದು, ಮಾ.4ರೊಳಗೆ 2ಎ ಮೀಸಲಾತಿ ದೊರೆಯದ್ದಿರೆ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದ್ದಾರೆ.
ಕೂಡಲಸಂಗಮದಿಂದ ಬೆಂಗಳೂರು ವರೆಗೆ ನಡೆಸಿ ಭಾನುವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಪಂಚಮಸಾಲಿ ಸಮಾವೇಶ ನಡೆಸಿ ಶಕ್ತಿಪ್ರದರ್ಶನದ ಮೂಲಕ 2ಎ ಮೀಸಲಾತಿಗಾಗಿ ಹಕ್ಕೊತ್ತಾಯ ಮಾಡಲಾಗಿತ್ತು.
ಸರ್ಕಾರದಿಂದ ಯಾವುದೇ ಸ್ಪಷ್ಟ ಭರವಸೆ ಸಿಗದ ಹಿನ್ನೆಲೆಯಲ್ಲಿ ಹೋರಾಟ ಮುಂದುವರೆದಿದ್ದು, ಫ್ರೀಡಂಪಾರ್ಕ್‍ನಲ್ಲಿ ಶ್ರೀಗಳ ನೇತೃತ್ವದಲ್ಲಿ ಮಾರ್ಚ್ 4ರ ವರೆಗೆ ಹಮ್ಮಿಕೊಳ್ಳಲಾಗಿರುವ ಧರಣಿ ಸತ್ಯಾಗ್ರಹದಲ್ಲಿ ಪಕ್ಷಾತೀತವಾಗಿ ಎಲ್ಲ ರಾಜಕೀಯ ನಾಯಕರು, ವಿವಿಧ ಮಠಾಧೀಶರು ಪಾಲ್ಗೊಂಡಿದ್ದರು.
ಇದೇ ರೀತಿ ಸಮಾಜವನ್ನು ನಿರ್ಲಕ್ಷಿಸುವುದು ಮುಂದುವರೆಸುತ್ತಿದ್ದರೆ ಪರಿಸ್ಥಿತಿ ಬದಲಾಗುವುದರಲ್ಲಿ ಅನುಮಾನವಿಲ್ಲ. ಬೇರೆ ಯಾರೇ ಮುಖ್ಯಮಂತ್ರಿಯಾಗಿದ್ದರೂ ನಾವು ಹೋರಾಟ ಮಾಡುವ ಅವಶ್ಯಕತೆ ಇರಲಿಲ್ಲ. ನಮ್ಮವರೇ ಮುಖ್ಯಮಂತ್ರಿಗಳಾಗಿದ್ದಾರೆ. ಅವರಲ್ಲದೆ ಯಾರು ನಮಗೆ ಮೀಸಲಾತಿ ನೀಡಬೇಕು. ಯಡಿಯೂರಪ್ಪನವರು ಕೊನೆಯ ಅವಧಿ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ. ಈ ಅವಧಿಯಲ್ಲೇ ನಮಗೆ ಮೀಸಲಾತಿ ಸಿಗಬೇಕು. ಬಾಯಿಮಾತಿನ ಭರವಸೆ ಬೇಡ. ಲಿಖಿತರೂಪದಲ್ಲಿ ನಮಗೆ ಸ್ಪಷ್ಟ ಭರವಸೆ ಸಿಗಬೇಕು. ಅಲ್ಲಿಯವರೆಗೆ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಹೇಳಿದರು.
ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಮಾತನಾಡಿ, ಸರ್ಕಾರದ ವಿಳಂಬ ನೀತಿಯಿಂದ ನಮ್ಮ ಹೋರಾಟ ಮಾಡು ಇಲ್ಲವೇ ಮಡಿ ಎಂಬಂತಾಗಿದೆ. ಮನವಿ ಕೊಡುವ ಪರಿಸ್ಥಿತಿ ಈಗ ಇಲ್ಲ. ಅನಗತ್ಯವಾಗಿ ವಿಳಂಬ ನೀತಿ ಅನುಸರಿಸಿದರೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದರು.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಇಂದಿನ ಪ್ರಮುಖ ಸುದ್ದಿ :-   ಧಾರವಾಡ: ಗರ್ಭಿಣಿಯ ಚೆಕ್​ಅಪ್​ ವೇಳೆ ವೈದ್ಯಕೀಯ ನಿರ್ಲಕ್ಷ್ಯ ತೋರಿದ ವೈದ್ಯೆಗೆ ₹ 11.10 ಲಕ್ಷ ಪರಿಹಾರ ನೀಡಲು ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

/ 5. ಒಟ್ಟು ವೋಟುಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement