ಮಹಾರಾಷ್ಟ್ರಕ್ಕೆ ಸಂಚರಿಸುವ ಎಲ್ಲ ಬಸ್‌ಗಳಿಗೆ ಪರ್ಮಿಟ್‌ ಇದೆ

posted in: ರಾಜ್ಯ | 0

ಬೆಳಗಾವಿ: ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಸಂಚರಿಸುವ ಎಲ್ಲ ಬಸ್‌ಗಳಿಗೂ ಪರ್ಮಿಟ್‌ ಇದ್ದು, ಯಾವುದೇ ಬಸ್‌ಗಳು ಅನಧಿಕೃತವಾಗಿ ಸಂಚಾರ ಮಾಡುತ್ತಿಲ್ಲ ಎಂದು ಬೆಳಗಾವಿ ಕೆಎಸ್‌ಆರ್‌ಟಿಸಿ ಡಿಸಿ ಎಂ.ಆರ್‌.ಮುಂಜಿ ತಿಳಿಸಿದ್ದಾರೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ನಮ್ಮ ಸಾರಿಗೆ ಬಸ್‌ಗಳು ಶುಚಿಯಾಗಿವೆ. ಇದರಿಂದಾಗಿ ಹೆಚ್ಚಿನ ಪ್ರಯಾಣಿಕರು ನಮ್ಮ ಬಸ್‌ಗಳಲ್ಲಿ ಪ್ರಯಾಣಿಸಲು ಬಯಸುತ್ತಾರೆ. ಇದನ್ನು ಸಹಿಸದ ಮಹಾರಾಷ್ಟ್ರ ಸಾರಿಗೆ ಅಧಿಕಾರಿಗಳು ಅಸಮಾಧಾನದಿಂದ ಶಿವಸೇನೆ ಪತ್ರವನ್ನು ಉಲ್ಲೇಖಿಸಿ ನಮಗೆ ಪತ್ರ ಬರೆದಿದ್ದಾರೆ. ಸಾಂಗ್ಲಿ ಸಾರಿಗೆ ಇಲಾಖೆ ಅಧಿಕಾರಿಗಳು ಬರೆದಿರುವ ಪತ್ರವನ್ನು ಪರಿಶೀಲಿಸಲಾಗಿದೆ. ನಮ್ಮ ಬಸ್‌ಗಳು ಶುಚಿಯಾಗಿರುವುದನ್ನು ಸಹಿಸಿಕೊಳ್ಳಲು ಅವರಿಗೆ ಸಾಧ್ಯವಾಗುತ್ತಿಲ್ಲ. ಅಲ್ಲಿಂದ ಬರುವ ಪ್ರಯಾಣಿಕರು ನಮ್ಮ ಬಸ್‌ಗಳಲ್ಲಿ ಪ್ರಯಾಣ ಮಾಡುತ್ತಾರೆ. ಇದರಿಂದ ಅಸಮಾಧಾನಗೊಂಡ ಸಾಂಗ್ಲಿ ಸಾರಿಗೆ ಅಧಿಕಾರಿಗಳು ಶಿವಸೇನೆ ಪತ್ರ ಉಲ್ಲೇಖಿಸಿ ನಮಗೆ ಪತ್ರ ಬರೆದಿದ್ದಾರೆ.

ಶಿವಸೇನೆ ಫೆ.೨೩ರಂದು ನಮ್ಮ ಬಸ್‌ಗಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಲಾಗಿದೆ. ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಕೊರೊನಾ ಪರೀಕ್ಷೆ ವರದಿ ತಂದವರಿಗೆ ಮಾತ್ರ ನಮ್ಮ ಬಸ್‌ಗಳಲ್ಲಿ ಸಂಚರಿಸಲು ಅವಕಾಶ ನೀಡಲಾಗುತ್ತದೆ ಎಂದು ತಿಳಿಸಿದರು,

ಇಂದಿನ ಪ್ರಮುಖ ಸುದ್ದಿ :-   ಅಂಬಲಿ ಹಳಸೀತು ಕಂಬಳಿ ಬೀಸಿತಲೇ ಪರಾಕ್’; ಕಾರಣಿಕ ವಾಣಿ

ಪ್ರಸ್ತುತ ನಮ್ಮ ರಾಜ್ಯದಿಂದ ಮಹಾರಾಷ್ಟ್ರಕ್ಕೆ ೩೪೦ ಬಸ್‌ಗಳು ಕಾರ್ಯಾಚರಣೆ ಮಾಡುತ್ತಿದ್ದು, ಅದರಲ್ಲಿ ೬೦ ಬಸ್‌ಗಳು ಮಹಾರಾಷ್ಟ್ರದಿಂದ ನಮ್ಮ ರಾಜ್ಯಕ್ಕೆ ಬರುತ್ತವೆ. ಬಸ್‌ನಲ್ಲಿ ಪ್ರಯಾಣ ಮಾಡುವವರು ಸ್ಯಾನಿಟೈಜರ್‌, ಮಾಸ್ಕ್‌ ಬಳಕೆ ಮಾಡಬೇಕು. ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಕೋರಿದರು.

 

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

/ 5. ಒಟ್ಟು ವೋಟುಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement