ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ತಡೆಗೆ “ನಾನು ಜವಾಬ್ದಾರʼ ಅಭಿಯಾನ

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ತೀವ್ರ ಗತಿಯಲ್ಲಿ ಹಡುತ್ತಿರುವುದರಿಂದ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ “ನಾನು ಜವಾಬ್ದಾರʼ ಅಭಿಯಾನ ಆರಂಭಿಸಲು ನಿರ್ಧರಿಸಿದ್ದಾರೆ.

ಮಾಸ್ಕ್‌, ಸ್ಯಾನಿಟೈಜರ್‌ ಬಳಕೆ, ಸಾಮಾಜಿಕ ಅಂತರ ಕಾಪಾಡುವ ಅವಶ್ಯಕತೆ ತಿಳಿಸುವುದು ಅಭಿಯಾನದ ಉದ್ದೇಶವಾಗಿದೆ.

ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ಪ್ರಕರಣಗಳ ಸಂಖ್ಯೆಯಲ್ಲಿ ಆತಂಕಕಾರಿ ಏರಿಕೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ರಾಜ್ಯದ ಜನರನ್ನುದ್ದೇಶಿಸಿ ಮಾತನಾಡಿ, ನಾನು ಜವಾಬ್ದಾರ ಅಭಿಯಾನದ ಉದ್ದೇಶದ ಬಗ್ಗೆ ತಿಳಿಸಿದರು. ಎಲ್ಲರೂ ಅಭಿಯಾನದಲ್ಲಿ ಪಾಲ್ಗೊಳ್ಳಬೇಕು ಎಂದರು.

ಹೆಚ್ಚುತ್ತಿರುವ ಕೊವಿಡ್‌ -19 ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ರಾಜ್ಯದಲ್ಲಿ ಧಾರ್ಮಿಕ, ಸಾಮಾಜಿಕ ಮತ್ತು ರಾಜಕೀಯ ಕೂಟಗಳನ್ನು ನಿಷೇಧಿಸಲಾಗುವುದು. ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್‌ ಆಗದಂತೆ ತಡೆಯುವ ಜವಾಬ್ದಾರಿ ಜನರ ಕೈಯಲ್ಲಿದೆ ಎಂದು ತಿಳಿಸಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ

ನಿಮ್ಮ ಕಾಮೆಂಟ್ ಬರೆಯಿರಿ

advertisement