ಬೆಳಗಾವಿ: ಕೋವಿಡ್-19 ರೂಪಾಂತರಿ ವೈರಾಣು ಹರಡದಂತೆ ಜಿಲ್ಲೆಯ ಗಡಿಯಲ್ಲಿ ಚೆಕ್ ಪೋಸ್ಟ್ ಸ್ಥಾಪನೆ ಸೇರಿದಂತೆ ಮಾರ್ಗಸೂಚಿಯಂತೆ ಎಲ್ಲ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.ಕಳೆದ 72 ಗಂಟೆಗಳ ಒಳಗಾಗಿ ಪಡೆದ ನೆಗೆಟಿವ್ ಆರ್‌ಟಿ-ಪಿಸಿಆರ್ ಕೋವಿಡ್ ತಪಾಸಣಾ ಪ್ರಮಾಣ ಪತ್ರವನ್ನು ಹೊಂದಿರುವುದು ಕಡ್ಡಾಯ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜಿಲ್ಲೆಯಾದ್ಯಂತ ಕೋವಿಡ್-19 ರೂಪಾಂತರಿ ವೈರಾಣುವಿನ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಬೆಳಗಾವಿ ಜಿಲ್ಲೆಯ ಗಡಿಗೆ ಹೊಂದಿಕೊಂಡಿರುವ ಮಹಾರಾಷ್ಟ್ರದಿಂದ ಜಿಲ್ಲೆಗೆ ಬರುವ ವಿಮಾನ/ಬಸ್ಸು/ರೈಲು ಹಾಗೂ ಖಾಸಗಿ ವಾಹನಗಳ ಮೂಲಕ ಪ್ರಯಾಣಿಸುವವರಿಗೆ ಕಳೆದ 72 ಗಂಟೆಗಳ ಒಳಗಾಗಿ ಪಡೆದ ನೆಗೆಟಿವ್ ಆರ್‌ಟಿ-ಪಿಸಿಆರ್ ಕೋವಿಡ್ ತಪಾಸಣಾ ಪ್ರಮಾಣ ಪತ್ರವನ್ನು ಹೊಂದಿರುವುದು ಕಡ್ಡಾಯಪಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಜಿಲ್ಲೆಯ ಗಡಿಯಲ್ಲಿರುವ ಚೆಕ್ ಪೋಸ್ಟ್ ಗಳಲ್ಲಿ ಪರಿಶೀಲಿಸಿದ ಬಳಿಕ ಪ್ರಯಾಣಿಕರು ರಾಜ್ಯವನ್ನು ಪ್ರವೇಶಿಸಲು ಅವಕಾಶವನ್ನು ಕಲ್ಪಿಸಲಾಗುತ್ತಿದೆ. ಆದೇಶವನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಎಂದು ತಿಳಿಸಿದ್ದಾರೆ.
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155
ನಿಮ್ಮ ಕಾಮೆಂಟ್ ಬರೆಯಿರಿ