ಮಹಾರಾಷ್ಟ್ರ ಸಚಿವ ಛಗನ್ ಭುಜಬಲ್ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಅವರು ತಮ್ಮ ಟ್ವೀಟರ್‌ನಲ್ಲಿ ಬರೆದುಕೊಂಡಿದ್ದಾರೆ.
ಕಳೆದ ೨-೩ ದಿನಗಳಲ್ಲಿ ನನ್ನೊಂದಿಗೆ ಸಂಪರ್ಕಕ್ಕೆ ಬಂದ ಪ್ರತಿಯೊಬ್ಬರೂ ಕೊವಿಡ್-೧೯ ಪರೀಕ್ಷೆ ಮಾಡಿಸಿಕೊಳ್ಳಬೇಕು. ನನ್ನ ಆರೋಗ್ಯ ಉತ್ತಮವಾಗಿದ್ದು, ನಾಗರಿಕರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದು ಅವರು ತಿಳಿಸಿದ್ದಾರೆ.
ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 14,199 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ. ಪ್ರಸ್ತುತ ಸಕ್ರಿಯ ಪ್ರಕರಣಗಳು 1.5 ಲಕ್ಷಕ್ಕಿಂತ ಹೆಚ್ಚಾಗಿದೆ, ಇದು ಮೂರು ವಾರಗಳ ಹಿಂದೆ ಕಂಡುಬಂದ ಮಟ್ಟವಾಗಿದೆ. ಈವರೆಗೆ 1.11 ಕೋಟಿಗೂ ಹೆಚ್ಚು ಜನರಿಗೆ ಲಸಿಕೆ ನೀಡಲಾಗಿದೆ.
ಕೇರಳ, ಮಹಾರಾಷ್ಟ್ರ, ಪಂಜಾಬ್, ಛತ್ತಿಸಗಢ ಮತ್ತು ಮಧ್ಯಪ್ರದೇಶಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ಕೊರೊನಾ ಲಸಿಕೆಯ ದ್ವಿತಿಯ ಅಭಿಯಾನ ಮಾರ್ಚ್ ಮೊದಲ ವಾರದಲ್ಲಿ ಆರಂಭಗೊಳ್ಳಲಿದ್ದು, ೫೦ ವರ್ಷಗಳಿಗೆ ಮೇಲ್ಪಟ್ಟ ವ್ಯಕ್ತಿಗಳಿಗೆ ಲಸಿಕೆ ಹಾಕಲಾಗುವುದು. ಮಹಾರಾಷ್ಟ್ರದ ಐದು ಜಿಲ್ಲೆಗಳಾದ ಅಮರಾವತಿ, ಅಕೋಲಾ, ಯವತ್ಮಾಲ್, ಬುಲ್ಡಾನಾ ಮತ್ತು ವಾಶಿಮ್ ಗಳಲ್ಲಿ ಕಟ್ಟುನಿಟ್ಟಾದ ನಿರ್ಬಂಧಗಳನ್ನು ವಿಧಿಸಿದೆ.
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ