ಮೈಸೂರು ಮೇಯರ್‌ ಆಯ್ಕೆ: ಬಿಜೆಪಿ-ಜೆಡಿಎಸ್‌ ಮೈತ್ರಿ..?

posted in: ರಾಜ್ಯ | 0

ಮೈಸೂರು: ಮೇಯರ್ ಆಯ್ಕೆಗೆ ಸಂಬಂಧಪಟ್ಟಂತೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಚರ್ಚಿಸುವುದಾಗಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು. ಅದರೊಂದಿಗೆ ಜೆಡಿಎಸ್‌ ಜೊತೆ ಹೊಂದಾಣಿಕೆ ಮಾಡಿಕೊಳ್ಳುವ ಸುಳಿವು ನೀಡಿದರು.
ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು ಈ ಸಂಬಂಧ ಪಕ್ಷದ ಅಧ್ಯಕ್ಷರು, ಸಂಸದರು, ಶಾಸಕರ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಾಗುವುದು. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಜೊತೆಯೂ ಚರ್ಚಿಸಲಾಗುವುದು. ಬಿಜೆಪಿಯವರೇ ಮೇಯರ್ ಆಗುವ ವಿಶ್ವಾಸವಿದೆ ಎಂದು ಹೇಳಿದರು.
ಚಿತ್ರದುರ್ಗದಲ್ಲಿ ಎಪಿಎಂಸಿ ಮಾದರಿಯಲ್ಲಿ ಖಾಸಗಿ ಮಾರುಕಟ್ಟೆ ನಿರ್ಮಾಣವಾಗುವ ಬಗ್ಗೆ ತಾನು ಮಾಧ್ಯಮದ ಮೂಲಕ ತಿಳಿದು ಕೊಂಡಿ ದ್ದೇನೆ. ಈ ಮಾರುಕಟ್ಟೆಯು ಸುಮಾರು 100 ಎಕರೆ ವಿಸ್ತೀರ್ಣದಲ್ಲಿ ಇರಲಿದೆ ಎಂದು ಹೇಳಲಾಗುತ್ತಿದೆ. ಇಂತಹ ಬೆಳವಣಿಗೆಗಳು ಆಗಬೇಕು. ರೈತರಿಗೆ ಉತ್ತಮ ಬೆಲೆ ಸಿಗಬೇಕು. ಈ ಸಂಬಂಧ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಹ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದಿದೆ. ನಾನು ಸಹ ಚಿತ್ರದುರ್ಗಕ್ಕೆ ಹೋದಾಗ ಆ ಯೋಜನೆ ಬಗ್ಗೆ ಪರಿಶೀಲಿಸುತ್ತೇನೆ ಎಂದು ಪ್ರಶ್ನೆಯೊಂದಕ್ಕೆ ಸಚಿವರು ಉತ್ತರಿಸಿದರು.
ಪಂಚಮಸಾಲಿ ಹೋರಾಟಕ್ಕೆ ಸಂಬಂಧಪಟ್ಟಂತೆ ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಮುಖ್ಯಮಂತ್ರಿಗಳು ತೀರ್ಮಾನ ತೆಗೆದುಕೊಳ್ಳುತ್ತಾರೆ. ಮುಖ್ಯಮಂತ್ರಿಗಳು ಈ ಬಗ್ಗೆ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಈ ಬಗ್ಗೆ ಸಂಪುಟ ಸಭೆಯಲ್ಲೂ ಚರ್ಚೆಗಳಾಗಿವೆ ಎಂದು ಉತ್ತರಿಸಿದರು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   7 ನೂತನ ವಿಶ್ವ ವಿದ್ಯಾಲಯಗಳಿಗೆ ಕುಲಪತಿಗಳ ನೇಮಕ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement