ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ: ಸೋನಿಯಾ, ರಾಹುಲ್‌ ಪ್ರತಿಕ್ರಿಯೆ ಕೇಳಿದ ದೆಹಲಿ ಹೈಕೋರ್ಟ್‌

ದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ ಕುರಿತು ದೆಹಲಿ ಉಚ್ಚ ನ್ಯಾಯಾಲಯ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ, ಪುತ್ರ ರಾಹುಲ್‌ ಗಾಂಧಿ ಸೇರಿದಂತೆ ಆರೋಪಿಗಳ ಪ್ರತಿಕ್ರಿಯೆ ಕೇಳಿದೆ.
ಬಿಜೆಪಿ ಸಂಸದ ಸುಬ್ರಮಣಿಯನ್‌ ಸ್ವಾಮಿ ಸಲ್ಲಿಸಿದ ಮನವಿ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ ಅರೋಪಿತರ ಪ್ರತಿಕ್ರಿಯೆ ಕೇಳಿದೆ. ಸುಬ್ರಮಣಿಯನ್‌ ಸ್ವಾಮಿ ಪರ ಸತ್ಯ ಸಭರ್ವಾಲ್‌ ಹಾಗೂ ಸೋನಿಯಾ ಗಾಂಧಿ ಹಾಗೂ ಇತರರ ಪರವಾಗಿ ತರುಣ್‌ ಚೀಮಾ ವಾದ ಮಂಡಿಸಿದರು. ನ್ಯಾಯಮೂರ್ತಿ ಸುರೇಶ್‌ ಕೈಟ್‌ ಆರೋಪಿಗಳ ಪ್ರತಿಕ್ರಿಯೆ ಬಯಸಿದರು.
ವಿಚಾರಣಾ ನ್ಯಾಯಾಲಯದಲ್ಲಿ ಖಾಸಗಿ ಕ್ರಿಮಿನಲ್ ದೂರಿನಲ್ಲಿ ಬಿಜೆಪಿ ಮುಖಂಡ ಸುಬ್ರಮಣಿಯನ್‌ ಸ್ವಾಮಿ, ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಮತ್ತು ಇತರರು ಹಣವನ್ನು ವಂಚಿಸಲು ಮತ್ತು ದುರುಪಯೋಗಪಡಿಸಿಕೊಳ್ಳಲು ಸಂಚು ಮಾಡಿದ್ದಾರೆ ಎಂದು ಆರೋಪಿಸಿದ್ದರು.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ರಾಹುಲ್ ಗಾಂಧಿ ಸ್ಪರ್ಧೆಯ ಸಸ್ಪೆನ್ಸ್ ನಡುವೆ ಅಮೇಥಿಯಲ್ಲಿ ರಾರಾಜಿಸುತ್ತಿರುವ "ರಾಬರ್ಟ್ ವಾದ್ರಾ ಅಬ್ ಕಿ ಬಾರ್" ಪೋಸ್ಟರ್...!

ನಿಮ್ಮ ಕಾಮೆಂಟ್ ಬರೆಯಿರಿ

advertisement