ಕಲ್ಲಿದ್ದಲು ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಮಂಗಳವಾರ ಕೋಲ್ಕತ್ತದಲ್ಲಿ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ನಿವಾಸಕ್ಕೆ ತೆರಳಿ ಅವರ ಪತ್ನಿ ರುಜಿರಾ ಬ್ಯಾನರ್ಜಿ ಅವರ ವಿಚಾರಣೆ ನಡೆಸಿದರು.
ವಿಚಾರಣೆ ಸಂದರ್ಭದಲ್ಲಿ ರುಜಿರಾ ಅವರ ಬ್ಯಾಂಕ್ ವಹಿವಾಟಿನ ವಿವರಗಳನ್ನು ಪಡೆದುಕೊಂಡರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಸೋಮವಾರ ರುಜಿರಾ ಸೋದರಿ ಮೇನಕಾ ಗಂಭೀರ್ ಅವರ ನಿವಾಸಕ್ಕೆ ತೆರಳಿ ಸುಮಾರು ೩ ಗಂಟೆ ವಿಚಾರಣೆ ನಡೆಸಿದ್ದರು.
ಎಪ್ರಿಲ್-ಮೇ ತಿಂಗಳಿನಲ್ಲಿ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ರಾಜಕೀಯ ವೈಷಮ್ಯಕ್ಕಾಗಿ ಸಿಬಿಐ ದಾಳಿ ನಡೆಸಲಾಗುತ್ತಿದೆ ಎಂದು ಟಿಎಂಸಿ ಆರೋಪ ಮಾಡಿದೆ.
advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ನಿಮ್ಮ ಕಾಮೆಂಟ್ ಬರೆಯಿರಿ