ಕೆಂಪುಕೋಟೆ ಹಿಂಸಾಚಾರ: ಇಬ್ಬರು ಆರೋಪಿಗಳ ಬಂಧನ

ದೆಹಲಿಯ ಕೆಂಪುಕೋಟೆಯಲ್ಲಿ ಗಣರಾಜ್ಯೋತ್ಸವದಂದು ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ರೈತ ನಾಯಕ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ.
ಜಮ್ಮು ನಗರದ ನಿವಾಸಿ ಜಮ್ಮು-ಕಾಶ್ಮೀರ ಸಂಯುಕ್ತ ಕಿಸಾನ್‌ ರಂಗದ ಅಧ್ಯಕ್ಷ ಮೊಹಿಂದರ್‌ ಸಿಂಗ್‌ ಹಾಗೂ ಮನದೀಪ್‌ ಸಿಂಗ್‌ ಬಂಧಿತರು. ಬಂಧಿತರಿಬ್ಬರೂ ದೆಹಲಿ ಹಿಂಸಾಚಾರದ ಮುಖ್ಯ ಸೂತ್ರಧಾರರು ಎಂದು ಪೊಲೀಸರು ತಿಳಿಸಿದ್ದಾರೆ. ದೆಹಲಿ ಅಪರಾಧ ವಿಭಾಗದ ಪೊಲೀಸರು ಜಮ್ಮು-ಕಾಶ್ಮೀರ ಪೊಲೀಸರ ಸಹಕಾರದೊಂದಿಗೆ ಇಬ್ಬರೂ ಆರೋಪಿಗಳನ್ನು ಸೋಮವಾರ ರಾತ್ರಿ ಜಮ್ಮುವಿನಲ್ಲಿ ಬಂಧಿಸಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ದೆಹಲಿ ವಕ್ಫ್ ಬೋರ್ಡ್ ಹಗರಣ : 9 ತಾಸುಗಳ ವಿಚಾರಣೆಯ ನಂತರ ಎಎಪಿ ನಾಯಕ ಅಮಾನತುಲ್ಲಾ ಖಾನ್ ಬಂಧಿಸಿದ ಇ.ಡಿ.

ನಿಮ್ಮ ಕಾಮೆಂಟ್ ಬರೆಯಿರಿ

advertisement