ನವ ದೆಹಲಿ: ಗಣರಾಜ್ಯೋತ್ಸವ ದಿನದಂದು ದೆಹಲಿಯ ಕೆಂಪು ಕೋಟೆ ಪ್ರದೇಶದಲ್ಲಿ ನಡೆಸಿದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಮಂಗಳವಾರ ಜಮ್ಮು ನಗರದಲ್ಲಿ ಒಬ್ಬ ರೈತ ಮುಖಂಡ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ.
ಬಂಧಿತರು ಜಮ್ಮು ನಗರದ ಛಾತಾ ಪ್ರದೇಶದ ನಿವಾಸಿ ಜಮ್ಮು ಮತ್ತು ಕಾಶ್ಮೀರದ ಯುನೈಟೆಡ್ ಕಿಸಾನ್ ಫ್ರಂಟ್ ಅಧ್ಯಕ್ಷ ಮೊಹಿಂದರ್ ಸಿಂಗ್ (45) ಹಾಗೂ ಗೊಲೆ ಗುಜಲ್ ವಾಸಿ ಮನದೀಪ್ ಸಿಂಗ್ (23).
ಇಬ್ಬರು ಆರೋಪಿಗಳು ಜ.26 ರಂದು ರೈತರು ಹಮ್ಮಿಕೊಂಡಿದ್ದ ಟ್ರ್ಯಾಕ್ಟರ್ ರ್ಯಾಲಿ ಕೆಂಪುಕೋಟೆಗೆ ನುಗ್ಗಿಸಿ ಹಿಂಸಾಚಾರ ನಡೆಸಿದ ಘಟನೆಯಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದಲ್ಲದೆ, ಸಂಚನ್ನು ರೂಪಿಸಿದ್ದರು ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಇವರನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರ್ ಹೆಚ್ಚುವರಿ ಪಿಆರ್‍ಒ ಅನಿಲ್ ಮಿಟ್ಟಲ್ ಹೇಳಿದ್ದಾರೆ.
ಆದಾಗ್ಯೂ, ಮೊಹಿಂದರ್ ಸಿಂಗ್ ಅವರ ಕುಟುಂಬ ಮೊಹಿಂದರ್ ನಿರಪರಾಧಿ ಮತ್ತು ಬಿಡುಗಡೆ ಮಾಡುವಂತೆ ಒತ್ತಾಯಿಸಿದೆ.
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155
ನಿಮ್ಮ ಕಾಮೆಂಟ್ ಬರೆಯಿರಿ