ರಾಜ್ಯಕ್ಕೆ ಬಂದ ನಂತರ ಸಚಿವ ನಿರಾಣಿ ಟೀಕೆಗೆ ಸೂಕ್ತ ಉತ್ತರ ಕೊಡುವೆ: ಯತ್ನಾಳ

ನವದೆಹಲಿ: ನಾನು ಕರ್ನಾಟಕಕ್ಕೆ ಹಿಂದಿರುಗಿದ ನಂತರ ಸಚಿವ ಮುರಗೇಶ ನಿರಾಣಿಗೆ ಸೂಕ್ತ ಉತ್ತರ ನೀಡುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದ್ದಾರೆ.
ಬಸನಗೌಡ ಪಾಟೀಲ ಯತ್ನಾಳ ಕಾಂಗ್ರೆಸ್‌ “ಬಿʼ ಟೀಮ್‌ ಇದ್ದಂತೆ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರಗೇಶ ನಿರಾಣಿ ಆರೋಪಕ್ಕೆ ಪ್ರತಿಕ್ರಿಯಿಸಿದ  ಯತ್ನಾಳ,  ರಾಜ್ಯದ ಕೆಲ ಸಚಿವರು ನನ್ನ ಹಾಗೂ ನನ್ನ ಸಮುದಾಯದ ಮಠಾಧೀಶರ ವಿರುದ್ಧ ಮಾತನಾಡಿದ್ದಾರೆ ಎಂಬುದು ನನ್ನ ಗಮನಕ್ಕೆ ಬಂದಿದೆ. ರಾಜ್ಯಕ್ಕೆ ಹಿಂದಿರುಗಿದ ನಂತರ ಟೀಕೆ ಹಾಗೂ ಆರೋಪಗಳಿಗೆ ತಕ್ಕ ಉತ್ತರ ನೀಡುತ್ತೇನೆ ಎಂದರು.
ಪಂಚಮಸಾಲಿ ಸಮುದಾಯಕ್ಕೆ 2ಎ ಸ್ಥಾನಮಾನವನ್ನು ಕೋರಿ ರ್ಯಾಲಿ ನಡೆಸಿದ್ದಕ್ಕಾಗಿ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಹಾಗೂ ಯತ್ನಾಳ ಅವರನ್ನು ಸಚಿವರಾದ ನಿರಾಣಿ ಹಾಗೂ ಸಿ.ಸಿ.ಪಾಟೀಲ ಟೀಕಿಸಿದ್ದರು.
ಪಕ್ಷದ ಹೈಕಮಾಂಡ್ ನನ್ನನ್ನು ಕರೆದಿಲ್ಲ, ಯಾವುದೇ ಮುಖಂಡರನ್ನು ಭೇಟಿಯಾಗಲು ದೆಹಲಿಗೆ ಬಂದಿಲ್ಲ. ಶ್ರೀ ಸಿದ್ದೇಶ್ವರ ಸಂಸ್ಥೆಯ ಸಿಬಿಎಸ್ಇ ಶಾಲೆಗಳಲ್ಲಿ ಒಂದನ್ನು ನೋಂದಾಯಿಸಲು ನಾನು ದೆಹಲಿಗೆ ಬಂದಿದ್ದೇನೆ. ನಾನು ಹಿಂದೂ ಧರ್ಮದ ಸಾಮಾಜಿಕ ನ್ಯಾಯಕ್ಕಾಗಿ ಹೋರಾಡುವುದನ್ನು ಮುಂದುವರಿಸುತ್ತೇನೆ. ನಾನು ಯಾರಿಗೂ ಹೆದರುವುದಿಲ್ಲ ಮತ್ತು ಈ ಆಂದೋಲನದಿಂದ ನಾನು ದೂರ ಹೋಗುವುದಿಲ್ಲ ಎಂದು ಯತ್ನಾಳ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಹೊರಗುತ್ತಿಗೆ ನೌಕರರ ನೇಮಕಾತಿಯಲ್ಲಿ ಮೀಸಲಾತಿ: ಸರ್ಕಾರದ ಆದೇಶ

4 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement