ಬೆಂಗಳೂರು: ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಹಿಂದೂ ಮುಖಂಡರ ಹತ್ಯೆಗೆ ಸಂಚು ರೂಪಿಸಿದ ಪ್ರಕರಣದಲ್ಲಿ ‘ಲಷ್ಕರೆ ತಯ್ಯಬಾ (ಎಲ್‌ಇಟಿ) ಉಗ್ರ ಸಂಘಟನೆ ಸದಸ್ಯ ಬೆಂಗಳೂರಿನ ವೈದ್ಯ ಸೇರಿ ಇಬ್ಬರ ವಿರುದ್ಧ ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ನ್ಯಾಯಾಲಯಕ್ಕೆ ಹೆಚ್ಚುವರಿ ದೋಷಾರೋಪ ಪಟ್ಟಿ ಸಲ್ಲಿಸಿದೆ.
ಡಾ. ಸಬೀಲ್ ಅಹಮದ್ ಮತ್ತು ಹೈದರಾಬಾದ್‌ನ ಅಸಾದುಲ್ಲಾಖಾನ್ ವಿರುದ್ಧ ಬೆಂಗಳೂರಿನ ಎನ್‌ಐಎ ಪ್ರಕರಣಗಳ ವಿಶೇಷ ನ್ಯಾಯಾಲಯಕ್ಕೆ ಸೋಮವಾರ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. 2012ರ ಆಗಸ್ಟ್ 29ರಂದು ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಎನ್‌ಐಎ ಹೈದರಾಬಾದ್ ಘಟಕ ವಹಿಸಿಕೊಂಡು ತನಿಖೆ ನಡೆಸಿತ್ತು.
ಪ್ರಕರಣದಲ್ಲಿ ತನಿಖೆ ನಡೆಸಿರುವ ಎನ್‌ಐಎ, ಈಗಾಗಲೇ 17 ಮಂದಿ ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಎನ್‌ಐಎ ಪ್ರಕರಣಗಳ ವಿಶೇಷ ನ್ಯಾಯಾಲಯ, 2016ರ ಸೆ.16ರಂದು 13 ಜನರಿಗೆ ತಲಾ 5 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ. ಉಳಿದ ಆರೋಪಿಗಳ ವಿರುದ್ಧ ವಿಚಾರಣೆ ಮುಂದುವರಿದಿದೆ. ಇನ್ನೂ ಆರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆಂದು ಎನ್‌ಐಎ ತಿಳಿಸಿದೆ.
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ