ಹಿರೇನಾಗವಲ್ಲಿ ಸ್ಫೋಟ ಪ್ರಕರಣ ಸಿಐಡಿ ತನಿಖೆಗೆ: ಬೊಮ್ಮಾಯಿ

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲ್ಲೂಕಿನ ಹಿರೇನಾಗವಲ್ಲಿಯಲ್ಲಿ ಮಂಗಳವಾರ ಸಂಭವಿಸಿದ ಜೆಲಿಟನ್‌ ಸ್ಫೋಟದ ಘಟನೆಯಲ್ಲಿ ಆರು ಜನ ಮೃತಪಟ್ಟ ಬಗ್ಗೆ ಮಾಹಿತಿ ಇದ್ದು,  ಸಿಐಡಿಯಿಂದ ತನಿಖೆ ನಡೆಸಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ತಲಾ 5 ಲಕ್ಷ ಪರಿಹಾರವನ್ನು ನೀಡಲಾಗುವುದು. ಜೊತೆಗೆ ಪ್ರಕರಣವನ್ನು ಸಿಐಡಿ ಮೂಲಕ ತನಿಖೆ ಮಾಡಿಸಲಾಗುವುದು ಎಂದರು.
ಘಟನೆಯಲ್ಲಿ ಯಾರೇ ಭಾಗಿಯಾಗಿದ್ದರೂ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಲಾಗುವುದು. ಕ್ರಷರ್ ಮಾಲೀಕರು ತಲೆಮರೆಸಿಕೊಂಡಿದ್ದಾರೆ ಎಂಬ ಮಾಹಿತಿ ಇದೆ. ಅವರ ಬಂಧನಕ್ಕಾಗಿ ವಿಶೇಷ ತಂಡ ರಚನೆ ಮಾಡಲಾಗಿದೆ ಎಂದರು.
ಘಟನೆಯಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಇದೆ. ಸ್ಫೋಟಕಗಳನ್ನು ಎಲ್ಲಿಂದ ತರಲಾಗಿತ್ತು? ಇದನ್ನು ಇಲ್ಲಿ ಹೇಗೆ ಸಂಗರಹಿಸಿ ಇಡಲಾಗಿತ್ತು ಎಂಬ ಬಗ್ಗೆಯೂ ತನಿಖೆ ನಡೆಸಲಾಗುವುದು. ಇಂತಹ ಘಟನೆ ನಡೆದಿದ್ದು ದುರದೃಷ್ಟಕರ ಎಂದು ವಿಷಾದಿಸಿದರು.
ಅಧಿಕಾರಿಗಳ ವಿರುದ್ಧ ಆಕ್ರೋಶ:ಮಂಗಳವಾರ ಬೆಳಿಗ್ಗೆ ಬೆಂಗಳೂರಿನಿಂದ ಘಟನಾ ಸ್ಥಳಕ್ಕೆ ಆಗಮಿಸಿದ ಸಚಿವ ಬೊಮ್ಮಾಯಿ, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಲತಾ, ಕೇಂದ್ರ ವಲಯ ಐಜಿಪಿ ಚಂದ್ರಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಮಿಥುನ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳ ವಿರುದ್ಧ ಆಕ್ರೋಶಗೊಂಡರು.
ಕಲ್ಲು ಗಣಿಗಾರಿಕೆ ನಡೆಯುತ್ತಿರುವ ಪ್ರದೇಶದಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ಜರುಗುತ್ತಿರುವ ಮಾಹಿತಿಯೂ ನಿಮ್ಮ ಗಮನಕ್ಕೆ ಬಂದಿರಲಿಲ್ಲವೇ ಎಂದು ಪ್ರಶ್ನಿಸಿದರು.
ನಿಮ್ಮ ನಿರ್ಲಕ್ಷ್ಯದಿಂದಲೇ ಪದೇ ಪದೇ ಇಂತಹ ಘಟನೆಗಳು ಮರುಕಳಿಸುತ್ತಲೇ ಇವೆ. ಯಾವುದೇ ಕಾರಣಕ್ಕೂ ಮುಂದೆ ಇಂತಹ ಘಟನೆಗಳು ನಡೆಯದಂತೆ ಜಾಗರೂಕರಾಗಿಬೇಕೆಂದು ಅಧಿಕಾರಿಗಳಿಗೆ ಬೊಮ್ಮಾಯಿ ತಾಕೀತು ಮಾಡಿದರು.

ಪ್ರಮುಖ ಸುದ್ದಿ :-   ನಟಿ ಸಿದ್ಧಾರ್ಥ- ನಟಿ ಅದಿತಿ ರಾವ್ ಮದುವೆ ಆಗಿಲ್ಲ : ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ; ಸ್ಪಷ್ಟನೆ ನೀಡಿದ ಅದಿತಿ

 

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement