ಜನಪ್ರತಿನಿಧಿಗಳೇ ಅಕ್ರಮ ಗಣಿಗಾರಿಕೆಯಲ್ಲಿ ಶಾಮೀಲು: ಮಾಜಿ ಸಿಎಂ ಕುಮಾರಸ್ವಾಮಿ ಆರೋಪ

ರಾಜ್ಯದಲ್ಲಿ ಜನಪ್ರತಿನಿಧಿಗಳೇ ಅಕ್ರಮ ಗಣಿಗಾರಿಕೆಯಲ್ಲಿ ಶಾಮೀಲಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.
ಹಲವು ಜನಪ್ರತಿನಿಧಿಗಳೇ ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದಾರೆ. ಚಿಕ್ಕಬಳ್ಳಾಪುರ ಗಣಿಯಲ್ಲಿ ಜಿಲೆಟಿನ್‌ ಸ್ಫೋಟಗೊಂಡಿರುವುದು ಸರಕಾರದ ಬೇಜವಾಬ್ದಾರಿತನವನ್ನು ತೋರಿಸುತ್ತದೆ. ಸರಕಾರಕ್ಕೆ ಜನರ ಜೀವದ ಬಗ್ಗೆ ಬದ್ಧತೆಯೇ ಇಲ್ಲವಾಗಿದೆ. ಪೊಲೀಸರು ಒಂದು ವಾರದ ಮುಂಚೆಯೇ ಘಟನಾ ಸ್ಥಳಕ್ಕೆ ಹೋಗಿದ್ದಾರೆ. ಅವರಿಗೆ ಈ ಬಗ್ಗೆ ಮೊದಲೇ ಮಾಹಿತಿ ಇತ್ತು ಎನಿಸುತ್ತಿದೆ ಎಂದರು.
ಮೈತ್ರಿ ಸರಕಾರದಲ್ಲಿ ಕಾವೇರಿ ಕಣಿವೆ ಪ್ರದೇಶದ ಯೋಜನೆಗಳಿಗೆ ೬೦೦೦ ಕೋಟಿ ರೂ. ಮೀಸಲಿಟ್ಟಿದ್ದೆ. ಆದರೆ ಬಿಜೆಪಿ ಸರಕಾರ ಅದನ್ನು ಹಿಂದಕ್ಕೆ ಪಡೆಯಿತು. ಈಗ ತಮಿಳುನಾಡಿನವರು ಕೇಂದ್ರದಿಂದ ೬೦೦೦ ಕೋಟಿ ರೂ. ಪಡೆದು ತಮ್ಮ ರಾಜ್ಯದ ಕೆರೆಗಳನ್ನು ತುಂಬಿಸಿಕೊಳ್ಳುವ ಯೋಜನೆ ಅನುಷ್ಠಾನಗೊಳಿಸಿದ್ದಾರೆ. ಇದರಿಂದ ರಾಜ್ಯದ ಬಿಜೆಪಿ ಸರಕಾರದ ಉದ್ದೇಶ ಸ್ಪಷ್ಟವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement