ಬೆಂಗಳೂರು: ನಿಯಮ ಬಾಹಿರವಾಗಿ ಜಿಲಿಟಿನ್ ಸಂಗ್ರಹಣೆ ಮಾಡುತ್ತಿದ್ದವರ ವಿರುದ್ಧ ಅಧಿಕಾರಿಗಳು ರೈಡ್ ಮಾಡಿದ ಸಂದರ್ಭದಲ್ಲಿ ತಕ್ಷಣವೇ ಆ ಜಿಲೆಟಿನ್ ಬೇರೆಡೆ ಸಾಗಿಸುವಾಗ ಹಿರೇನಾಗವಲ್ಲಿ ಬಳಿ ದುರಂತ ಸಂಭವಿಸಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಸಾವಿನ ಮನೆಯಲ್ಲೂ ತಮ್ಮ ರಾಜಕೀಯ ಬೇಯಿಸಿಕೊಳ್ಳಲು ಮತ್ತು ಇನ್ನೊಬ್ಬರ ತೇಜೋವಧೆ ಮಾಡಲು ಯತ್ನಿಸುತ್ತಿರುವ ಕಾಂಗ್ರೆಸ್‍ನವರಿಗೆ ನಾಚಿಕೆಯಾಗಬೇಕು. ಘಟನೆ ಹಿಂದೆ ಯಾರೇ ಇರಲಿ ಅವರ ವಿರುದ್ಧ ನಿಷ್ಪಕ್ಷಪಾತ ಕ್ರಮ ಕೈಗೊಳ್ಳುವುದು ನಿಶ್ಚಿತ ಎಂದು ಹೇಳಿರುವ ಸಚಿವರು ಈ ಸಂಬಂಧ ಟ್ವೀಟ್ ಮಾಡಿದ್ದಾರೆ.
ಜವಾಬ್ದಾರಿ ಸ್ಥಾನದಲ್ಲಿರುವ ನಾಯಕರು ವಾಸ್ತವಾಂಶ ಅರಿಯದೆ ಸಾವಿನ ಮನೆಯಲ್ಲೂ ರಾಜಕೀಯ ಮಾಡುವುದು ಶೋಭೆ ತರುವುದಿಲ್ಲ. ಅಕ್ರಮ ಗಣಿಗಾರಿಕೆಗೆ ಎಂದೂ ಬೆಂಬಲ ನೀಡಿಲ್ಲ. ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವನಾಗಿ ಮೃತರ ಕುಟುಂಬಗಳಿಗೆ ಪರಿಹಾರ ದೊರಕಿಸುವುದು ನನ್ನ ಕರ್ತವ್ಯ. ಅದನ್ನು ಮಾಡುತ್ತೇನೆ. ಕಾನೂನು ಉಲ್ಲಂಘಿಸಿ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ ಎಂದು ತಿಳಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ