ಶುಲ್ಕ ಕಡಿತ ವಿರೋಧಿಸಿ ಖಾಸಗಿ ಶಾಲಾ ಮಂಡಳಿಗಳ ಪ್ರತಿಭಟನೆ

ಬೆಂಗಳೂರು: ಶುಲ್ಕ ಕಡಿತ ವಿರೋಧಿಸಿ ಖಾಸಗಿ ಶಾಲಾ ಆಡಳಿತ ಮಂಡಳಿಯವರು ನಗರದಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಿ ಸರ್ಕಾರದ ಕ್ರಮ ಖಂಡಿಸಿದರು.
ಶೇ.30ರಷ್ಟು ಶುಲ್ಕ ಕಡಿತ ಮಾಡಿರುವುದರಿಂದ ಖಾಸಗಿ ಶಾಲೆಗಳವರಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ಖಾಸಗಿ ಶಾಲಾ ಆಡಳಿತ ಮಂಡಳಿ ಬೋಧಕ-ಬೋಧಕೇತರ ಸಿಬ್ಬಂದಿ ಸಮನ್ವಯ ಸಮಿತಿ ವತಿಯಿಂದ ರೈಲ್ವೆ ನಿಲ್ದಾಣದಿಂದ ಫ್ರೀಡಂಪಾರ್ಕ್‍ವರೆಗೆ ಸಾವಿರಾರು ಶಾಲಾ ಶಿಕ್ಷಕರು, ಬೋಧಕೇತರ ಸಿಬ್ಬಂದಿ ಬೃಹತ್ ರ್ಯಾಲಿ ನಡೆಸಿ ಸರ್ಕಾರ ಈ ಕ್ರಮವನ್ನು ಹಿಂಪಡೆಯುವಂತೆ ಆಗ್ರಹಿಸಿದರು.
ಸೇರಿದಂತೆ ವಿವಿಧೆಡೆಯಿಂದ ಆಗಮಿಸಿದ್ದ ಸಾವಿರಾರು ಶಿಕ್ಷಕರು ಶುಲ್ಕ ಕಡಿತ ಸರ್ಕಾರ ಕೂಡಲೇ ಹಿಂಪಡೆಯಬೇಕೆಂದು ಆಗ್ರಹಿಸಿದರು.
ಪ್ರತಿಭಟನೆ ನೇತೃತ್ವ ವಹಿಸಿದ್ದ ಪುಟ್ಟಣ್ಣ, ಸಂಘಟನೆ ಸಂಚಾಲಕ ಡಿ.ಶಶಿಕುಮಾರ್ ಸರ್ಕಾರದ ಕ್ರಮ ಖಂಡಿಸಿದರು.
ಕೊರೊನಾ ಸಂಕಷ್ಟದಲ್ಲಿ ಶಿಕ್ಷಣ ಸಂಸ್ಥೆಗಳನ್ನು ನಡೆಸುವುದೇ ದುಸ್ತರವಾಗಿದೆ.
ಸಾಲ ಮಾಡಿ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿರುವ ಸಂದರ್ಭದಲ್ಲಿ ಸಾಲದ ಕಂತು ಕಟ್ಟಲು ಸಮಯಾವಕಾಶ ಕೂಡ ನೀಡಿಲ್ಲ. ವಿದ್ಯುತ್ ಬಿಲ್ ಸೇರಿದಂತೆ ಮತ್ತಿತರ ಯಾವುದೇ ರಿಯಾಯಿತಿಗಳನ್ನು ಕೂಡ ಸರ್ಕಾರ ನೀಡಿಲ್ಲ. ಈಗ ಏಕಾಏಕಿ ಶೇ.30ರಷ್ಟು ಶುಲ್ಕ ಕಡಿತಗೊಳಿಸಿದರೆ ನಾವು ಸಿಬ್ಬಂದಿಗೆ ಸಂಬಳ ಕೊಡುವುದು ಹೇಗೆ ಎಂದು ಪ್ರಶ್ನಿಸಿದರು.
ಪ್ರಾಥಮಿಕ ಶಾಲಾ ಪುನರಾರಂಭದ ಗೊಂದಲ, ಆರ್‍ಟಿಇ ಮರುಪಾವತಿಯಾಗದೆ ಕಿರುಕುಳ ಹಾಗೂ ಭ್ರಷ್ಟಾಚಾರದಲ್ಲಿ ತೊಡಗಿರುವ ಶಿಕ್ಷಣ ಇಲಾಖೆ ವಿರುದ್ಧ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ. ಸರ್ಕಾರ ಶುಲ್ಕ ಕಡಿತ ಕ್ರಮವನ್ನು ಹಿಂಪಡೆಯಬೇಕು. ಗ್ರಾಮೀಣ ಪ್ರದೇಶದಲ್ಲಿರುವ ಶಾಲೆಗಳನ್ನು ನಡೆಸುವುದಕ್ಕೂ, ನಗರ ಪ್ರದೇಶದಲ್ಲಿರುವ ಕಾರ್ಪೊರೇಟ್ ಶಾಲೆಗಳನ್ನು ನಡೆಸುವುದಕ್ಕೂ ವ್ಯತ್ಯಾಸವಿದೆ. ಸರ್ಕಾರ ಈ ನಿಟ್ಟಿನಲ್ಲಿ ಚಿಂತಿಸಿ ಕ್ರಮ ಕೈಗೊಳ್ಳಬೇಕು.ಎಂದು ಒತ್ತಾಯಿಸಿದರು.

ಪ್ರಮುಖ ಸುದ್ದಿ :-   ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್​ ಪ್ರಕರಣ : ಪ್ರಮುಖ ಆರೋಪಿ ಬಂಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement