ಹಿಂದೂ ಮುಖಂಡರ ಹತ್ಯೆ ಸಂಚು:ಇಬ್ಬರ ವಿರುದ್ಧ ಎನ್‌ಐಎ ದೋಷಾರೋಪ ಪಟ್ಟಿ ಸಲ್ಲಿಕೆ

ಬೆಂಗಳೂರು: ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಹಿಂದೂ ಮುಖಂಡರ ಹತ್ಯೆಗೆ ಸಂಚು ರೂಪಿಸಿದ ಪ್ರಕರಣದಲ್ಲಿ ‘ಲಷ್ಕರೆ ತಯ್ಯಬಾ (ಎಲ್‌ಇಟಿ) ಉಗ್ರ ಸಂಘಟನೆ ಸದಸ್ಯ ಬೆಂಗಳೂರಿನ ವೈದ್ಯ ಸೇರಿ ಇಬ್ಬರ ವಿರುದ್ಧ ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ನ್ಯಾಯಾಲಯಕ್ಕೆ ಹೆಚ್ಚುವರಿ ದೋಷಾರೋಪ ಪಟ್ಟಿ ಸಲ್ಲಿಸಿದೆ.
ಡಾ. ಸಬೀಲ್‌ ಅಹಮದ್‌ ಮತ್ತು ಹೈದರಾಬಾದ್‌ನ ಅಸಾದುಲ್ಲಾಖಾನ್‌ ವಿರುದ್ಧ ಬೆಂಗಳೂರಿನ ಎನ್‌ಐಎ ಪ್ರಕರಣಗಳ ವಿಶೇಷ ನ್ಯಾಯಾಲಯಕ್ಕೆ ಸೋಮವಾರ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. 2012ರ ಆಗಸ್ಟ್‌ 29ರಂದು ಬಸವೇಶ್ವರನಗರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಎನ್‌ಐಎ ಹೈದರಾಬಾದ್‌ ಘಟಕ ವಹಿಸಿಕೊಂಡು ತನಿಖೆ ನಡೆಸಿತ್ತು.
ಪ್ರಕರಣದಲ್ಲಿ ತನಿಖೆ ನಡೆಸಿರುವ ಎನ್‌ಐಎ, ಈಗಾಗಲೇ 17 ಮಂದಿ ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಎನ್‌ಐಎ ಪ್ರಕರಣಗಳ ವಿಶೇಷ ನ್ಯಾಯಾಲಯ, 2016ರ ಸೆ.16ರಂದು 13 ಜನರಿಗೆ ತಲಾ 5 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ. ಉಳಿದ ಆರೋಪಿಗಳ ವಿರುದ್ಧ ವಿಚಾರಣೆ ಮುಂದುವರಿದಿದೆ. ಇನ್ನೂ ಆರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆಂದು ಎನ್‌ಐಎ ತಿಳಿಸಿದೆ.

ಪ್ರಮುಖ ಸುದ್ದಿ :-   ರಾಯಬರೇಲಿಯಿಂದ ಅಕ್ಕನ ವಿರುದ್ಧ ಸ್ಪರ್ಧಿಸಲು ಬಿಜೆಪಿ ನೀಡಿದ್ದ ಆಫರ್‌ ತಿರಸ್ಕರಿಸಿದರೇ ವರುಣ್‌ ಗಾಂಧಿ..?

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement