ಹಿರೇನಾಗವಲ್ಲಿ ಘಟನೆಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ:ಸರ್ಕಾರಕ್ಕೆ ಎಚ್‌ಡಿಕೆ ತಾಕೀತು

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವಲ್ಲಿಯಲ್ಲಿ ಸಂಭವಿಸಿದ ಸ್ಫೋಟದಂತಹ ಘಟನೆಗಳು ಮರುಕಳಿಸದಂತೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ಜಿಲೆಟಿನ್‌ ಸ್ಪೋಟದಲ್ಲಿ ಆರು ಮಂದಿ ಮೃತಪಟ್ಟಿದ್ದರು. ಆ ಘಟನೆ ಮಾಸುವ ಮುನ್ನವೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಮತ್ತೊಂದು ದುರ್ಘಟನೆ ನಡೆದಿದ್ದು, ಇಲ್ಲಿಯೂ ಆರು ಮಂದಿ ಮೃತಪಟ್ಟಿದ್ದಾರೆ. ಇಂತಹ ಘಟನೆಗಳು ನಡೆದಾಗ ಸಚಿವರು ಸ್ಥಳಕ್ಕೆ ಭೇಟಿ ನೀಡಿ ಸಮಯಕ್ಕೆ ತಕ್ಕ ಉತ್ತರ ಕೊಟ್ಟರೆ ಸಾಲದು.
ಅಕ್ರಮ ಗಣಿಗಾರಿಕೆ ತಡೆಯಲು ಕಠಿಣ ಕ್ರಮ ಆಗಬೇಕು ಎಂದು ಆಗ್ರಹಿಸಿದರು.
ಸರ್ಕಾರದ ಅಧಿಕಾರಿಗಳು ಗಣಿಗಾರಿಕೆಯಿಂದ ಚಂದಾ ವಸೂಲಿ ಮಾಡುತ್ತಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಗಣಿ ಸಚಿವರು ನಿನ್ನೆ ಮಂಡ್ಯದಲ್ಲಿ ಸ್ಥಳ ಪರಿಶೀಲನೆ ಮಾಡಿ ಬಂದಿದ್ದಾರೆ. ಅಲ್ಲಿ ಏನೇನು ನಡೆಯುತ್ತಿದೆ ಎಂಬುದರ ಬಗ್ಗೆ ತಮಗೆ ಮಾಹಿತಿ ಇದೆ. ಜನರು ಕೂಡ ಹಣ ಸಂಪಾದನೆ ಮಾಡುವವರನ್ನು ಮೆಚ್ಚುತ್ತಾರೆಯೇ ಹೊರತು ಪ್ರಾಮಾಣಿಕರನ್ನು ಪೋಷಿಸುವುದಿಲ್ಲ ಎಂದು ಹೇಳಿದರು.
ವಿಜಯಪುರ ಜಿಲ್ಲೆಯಲ್ಲಿ ಅಮಾಯಕರನ್ನು ಬಂಧಿಸಲಾಗಿದೆ. ಇಂತಹ ಗಣಿಗಾರಿಕೆಯಿಂದ ಅಮಾಯಕರಿಗೆ ತೊಂದರೆಗೊಳಗಾಗುತ್ತಾರೆಯೇ ಹೊರತು ಜನಸಾಮಾನ್ಯರ ರಕ್ಷಣೆಯಾಗುತ್ತಿಲ್ಲ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ ನಂತರ ಇಂತಹ ಘಟನೆ ಸಂಭವಿಸಿದೆ ಎಂದು ಸಚಿವರೊಬ್ಬರು ಹೇಳಿದ್ದಾರೆ. ಜಿಲೆಟಿನ್ ಬಳಕೆ ಬಗ್ಗೆ ಮುನ್ನೆಚ್ಚರಿಕೆ ಕೈಗೊಂಡಿದ್ದರೆ ಇಂತಹ ಘಟನೆ ಸಂಭವಿಸುತ್ತಿರಲಿಲ್ಲ ಎಂದರು.

ಪ್ರಮುಖ ಸುದ್ದಿ :-   ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್‌ ಆರು ದಿನ ಸಿಐಡಿ ಕಸ್ಟಡಿಗೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement