ಹಿರೇನಾಗವಲ್ಲಿ ಸ್ಫೋಟ ಪ್ರಕರಣ: ಸಚಿವ ನಿರಾಣಿ ದಿಗ್ಭ್ರಾಂತಿ

ನವದೆಹಲಿ: ಚಿಕ್ಕಬಳ್ಳಾಪುರ ಜಿಲ್ಲೆ ಗುಂಡಿಬಂಡೆ ತಾಲ್ಲೂಕಿನ ಹಿರೆನಾಗವಲ್ಲಿಯಲ್ಲಿ ಜೆಲಿಟಿನ್ ಕಡ್ಡಿ ಸೋಟಿಸಿ ಆರು ಜನ ಮೃತಪಟ್ಟಘಟನೆಗೆ ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್. ನಿರಾಣಿ ಆಘಾತ ವ್ಯಕ್ತಪಡಿಸಿದ್ದಾರೆ.
ಸಂತ್ರಸ್ತರ ಕುಟುಂಬಗಳಿಗೆ ಸಂತಾಪ ಸೂಚಿಸಿರುವ ಅವರು, ಮೃತರ ಕುಟುಂಬ ಸದಸ್ಯರಿಗೆ ಮತ್ತು ಗಾಯಾಳುಗಳಿಗೆ ಎಲ್ಲಾ ನೆರವು ನೀಡುವ ಭರವಸೆ ನೀಡಿದ್ದಾರೆ. ಶಿವಮೊಗ್ಗ ಸ್ಫೋಟದ ನಂತರ  ಮತ್ತೊಂದು ದುರಂತ  ನಡೆದಿರುವುದು ತೀವ್ರ ನೋವು ತಂದಿದೆ. ಜಿಲಿಟಿನ್ ಕಡ್ಡಿ ಸ್ಫೋಟದಲ್ಲಿ ಆರು ಜನರು ಪ್ರಾಣ ಕಳೆದುಕೊಂಡಿದ್ದು ನೋವಿನ ಸಂಗತಿ ಎಂದು ಕಂಬನಿ ಮಿಡಿದಿದ್ದಾರೆ.
ಇದು ಅತ್ಯಂತ ದುರದೃಷ್ಟಕರ ಘಟನೆ. ಸಂತ್ರಸ್ತರ ಕುಟುಂಬಗಳಿಗೆ ನನ್ನ ಸಂತಾಪ ವ್ಯಕ್ತಪಡಿಸುತ್ತೇನೆ. ಗಾಯಾಳುಗಳ ಶೀಘ್ರ ಚೇತರಿಕೆಗಾಗಿ  ದೇವರಲ್ಲಿ ಪ್ರಾರ್ಥಿಸುತ್ತೇನೆ. ಸಂತ್ರಸ್ತರ ಕುಟುಂಬಗಳಿಗೆ ಮತ್ತು ಗಾಯಗೊಂಡ ವ್ಯಕ್ತಿಗೆ ಸರ್ಕಾರ ಎಲ್ಲಾ ಸಹಾಯವನ್ನು ನೀಡಲಿದೆ ಎಂದು ಭರವಸೆ ನೀಡಿದ್ದಾರೆ. ಘಟನೆಗೆ ಕಾರಣರಾದ ಆರೋಪಿಗಳ ವಿರುದ್ಧ ಕಠಿಣ ಕಾನೂನು ತೆಗೆದುಕೊಳ್ಳಲಾಗುವುದು. ಸರ್ಕಾರ ಸಂಪೂರ್ಣ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement