ಅಂತಾರಾಜ್ಯ ಪ್ರಯಾಣ ನಿಷೇಧಿಸಿಲ್ಲ, ಕೊವಿಡ್‌ ನೆಗೆಟಿವ್‌ ವರದಿ ಕಡ್ಡಾಯ ಮಾಡಿದ್ದೇವೆ: ಸಚಿವ ಸುಧಾಕರ ಸ್ಪಷ್ಟನೆ

ಬೆಂಗಳೂರು: ಕರ್ನಾಟಕ ಮತ್ತು ಕೇರಳ ನಡುವಿನ ಅಂತಾರಾಜ್ಯ ಪ್ರಯಾಣವನ್ನು ನಿಷೇಧಿಸಿಲ್ಲ. ಆದರೆ ಮುಂಜಾಗ್ರತಾ ಕ್ರಮವಾಗಿ ಅಲ್ಲಿಂದ ಬರುವವರು 72 ಗಂಟೆಗೂ ಮುನ್ನ ಕೋವಿಡ್ ಆರ್‍ಟಿ ಪಿಸಿಆರ್ ನೆಗೆಟಿವ್ ವರದಿ ಹೊಂದಿರಬೇಕು ಎಂಬುದನ್ನು ಕಡ್ಡಾಯ ಮಾಡಿದ್ದೇವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಸ್ಪಷ್ಟಪಡಿಸಿದ್ದಾರೆ.

ಈ ಸಂಬಂಧ ಅವರು ಟ್ವೀಟ್ ಮಾಡಿದ್ದು, ಹೋಟೆಲ್, ರೆಸಾರ್ಟ್, ಹಾಸ್ಟೆಲ್, ಹೋಂ ಸ್ಟೇಗಳು ಸೇರಿದಂತೆ ವಿವಿಧೆಡೆ ಕೇರಳದಿಂದ ಹಿಂದಿರುಗುವವರಿಗೆ ಪ್ರವೇಶ ನೀಡುವ ಮುನ್ನ ಕೋವಿಡ್ ನೆಗೆಟಿವ್ ವರದಿ ಖಾತರಿಪಡಿಸಿಕೊಳ್ಳುವುದು ಕಡ್ಡಾಯ ಎಂದು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಯಾಣಕ್ಕೂ ಮೊದಲಿನ 72 ಗಂಟೆಗಳ ಅವಧಿಯಲ್ಲಿ ನಡೆಸಲಾದ ಕೋವಿಡ್ ಆರ್‌ಟಿ ಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿ ಹೊಂದಿದ್ದರೆ ಯಾವುದೇ ಸಮಸ್ಯೆಯಾಗದು ಎಂದು ಆರೋಗ್ಯ ಇಲಾಖೆ ಹೊರಡಿಸಿದ ಮಾರ್ಗಸೂಚಿ ಸಹಿತ ಟ್ವೀಟ್ ಮಾಡಿದ್ದಾರೆ.
ವಯನಾಡ್ ಜಿಲ್ಲಾ ಪಂಚಾಯತ್ ಅಧಿಕಾರಿಗಳು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದು, ಕರ್ನಾಟಕದ ಗಡಿಯಲ್ಲಿ ಜಾರಿಗೊಳಿಸಿರುವ ನಿರ್ಬಂಧ ತೆರವುಗೊಳಿಸಬೇಕು, ಇದರಿಂದ ಎರಡು ರಾಜ್ಯಗಳ ಸರಕು ಸಾಗಾಟಕ್ಕೆ ತೊಂದರೆ ಉಂಟಾಗಲಿದೆ. ಉತ್ತರ ಕೇರಳವು ತರಕಾರಿಗಳಿಗೆ ಕರ್ನಾಟಕವನ್ನು ಅವಲಂಬಿಸಿದ್ದರೆ, ಕರ್ನಾಟಕದ ಗಡಿಪ್ರದೇಶಗಳಿಂದ ಕೃಷಿ ಕಾರ್ಮಿಕರು ನಿಯಮಿತವಾಗಿ ಕೇರಳದ ವಯನಾಡಿನಲ್ಲಿರುವ ತೋಟಗಳಿಗೆ ಸಂಚರಿಸುತ್ತಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದರು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.
ಕೇರಳದವರು ಗಡಿ ಚೆಕ್ ಪೋಸ್ಟ್ ಮೂಲಕ ಒಳಬರುವ ಸಂಚಾರವನ್ನು ನಿರ್ಬಂಧಿಸಿದ್ದು, ಸಂಚಾರವನ್ನು ನಿಲ್ಲಿಸಲು ಅಂತರ್-ರಾಜ್ಯ ರಸ್ತೆಗಳಲ್ಲಿ ಮಣ್ಣನ್ನು ತಂದು ಸುರಿದಿದ್ದಾರೆ ಅಲ್ಲದೆ. ಕೊರೋನಾ ಹೊರತಾದ ಬೇರೆ ರೋಗಿಗಳನ್ನು ಕಾಸರಗೋಡಿನಿಂದ ದಕ್ಷಿಣ ಕನ್ನಡಕ್ಕೆ ಕರೆದೊಯ್ಯುವ ಆ್ಯಂಬುಲೆನ್ಸ್‍ಗಳಿಗೂ ಪ್ರವೇಶ ನಿರಾಕರಿಸಲಾಗಿತ್ತು ಎಂದು ಎಂದು ಆರೋಪಿಸಲಾಗಿತ್ತು.

ಪ್ರಮುಖ ಸುದ್ದಿ :-   ಸೆರೆ ಕಾರ್ಯಾಚರಣೆ ವೇಳೆ ಕಾಡಾನೆ ಜೊತೆ ಕಾದಾಟದಲ್ಲಿ 8 ಬಾರಿ ಮೈಸೂರು ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವು

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement