ದೆಹಲಿ ಗಡಿಗಳಲ್ಲಿ ಬೇಡಿಕೆ ಈಡೇರಿಕೆಗಾಗಿ ಹೋರಾಟ ನಡೆಸುತ್ತಿರುವ ರೈತರು ಸದ್ಯಕ್ಕೆ ಹೋರಾಟವನ್ನು ಕೈಬಿಡುವ ಲಕ್ಷಣಗಳು ಕಾಣುತ್ತಿಲ್ಲ. ದೀರ್ಘ ಬಾಳಿಕೆಯ ಕುನ್ಬಾ ಟೆಂಟ್ಗಳನ್ನು ನಿರ್ಮಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.
ಇನ್ನಷ್ಟು ತಿಂಗಳುಗಳ ಕಾಲ ಪ್ರತಿಭಟನೆಯನ್ನು ಮುಂದುವರೆಸುವ ಉದ್ದೇಶದಿಂದ ಶಾಶ್ವತವೆನ್ನಬಹುದಾದ ಕುನ್ಬಾ ಡೇರೆಗಳನ್ನು ನಿರ್ಮಿಸಲು ಮುಂದಾಗಿದ್ದಾರೆ. ಇದಕ್ಕಾಗಿ ಪ್ರತಿಯೊಂದು ಕುಟುಂಬಗಳಿಂದ ೨೦೦ ರೂ.ಗಳಿಂದ ೫೦೦ರೂ.ವರೆಗೆ ದೇಣಿಗೆ ಸಂಗ್ರಹಿಸುತ್ತಿದ್ದಾರೆ.
ಇದೇ ಸಂದರ್ಭದಲ್ಲಿ ಗೋದಿ ಕೊಯ್ಲು ಆರಂಭವಾಗಲಿರುವುದರಿಂದ ಸರದಿಯಂತೆ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ನಿರ್ಧರಿಸಿದ್ದಾರೆ. ರೈತ ವಿರೋಧಿ ಕಾನೂನುಗಳನ್ನು ರದ್ದುಗೊಳಿಸದೆ ರೈತರು ತಮ್ಮ ಮನೆಗಳಿಗೆ ಹಿಂದಿರುಗುವುದಿಲ್ಲ. ಅದಕ್ಕಾಗಿಯೇ ನಾವು ತಿಂಗಳುಗಳವರೆಗೆ ಗಡಿಯಲ್ಲಿ ಉಳಿಯಲು ವ್ಯವಸ್ಥೆ ಮಾಡಿದ್ದೇವೆ. ಇದಕ್ಕಾಗಿ ಕುನ್ಬಾ ಟೆಂಟ್ಗಳನ್ನು ನಿರ್ಮಿಸಲು ಮುಂದಾಗಿದ್ದೇವೆ ಎಂದು ಹಿಸಾರ್ ಜಿಲ್ಲೆಯ ದಾನೋಡಾ ಗ್ರಾಮದ ರೈತ ಕುಲ್ವಂತ್ ಸಿಂಗ್ ಹೇಳುತ್ತಾರೆ.
ಬಿಕೆಯು (ಯಮುನಾನಗರ) ಜಿಲ್ಲಾಧ್ಯಕ್ಷ ಸುಭಾಷ್ ಗುರ್ಜರ್, ಪ್ರತಿ ಕುಟುಂಬದಿಂದ ಕನಿಷ್ಠ ಒಬ್ಬ ರೈತನಾದರೂ ದೆಹಲಿ ಗಡಿಯಲ್ಲಿ ಉಳಿಯಬೇಕು ಎಂಬುದು ನಮ್ಮ ಉದ್ದೇಶ. ಬೇಸಿಗೆಯಲ್ಲಿ ಕೂಲರ್‌ಗಳಿಗಾಗಿ ಗಡಿಯಲ್ಲಿ ವಿದ್ಯುತ್ ಸಂಪರ್ಕಕ್ಕಾಗಿ ರೈತರು ಅರ್ಜಿ ಸಲ್ಲಿಸಿದ್ದಾರೆ. ನಾವು ಸೊಳ್ಳೆ ಪರದೆಗಳನ್ನು ಕೂಡ ವ್ಯವಸ್ಥೆ ಮಾಡುತ್ತಿದ್ದೇವೆ ಎಂದು ಹೇಳುತ್ತಾರೆ.
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ