ಪುದುಚೇರಿಯಲ್ಲಿ ರಾಷ್ಟ್ರಪತಿ ಆಡಳಿತ ಜಾರಿ

ಪುದುಚೆರಿ: ಪುದುಚೇರಿ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲು ಸಾಧ್ಯವಾಗದೆ ಅಲ್ಲಿನ ಮುಖ್ಯಮಂತ್ರಿ ಸ್ಥಾನಕ್ಕೆ ,ವಿ ನಾರಾಯಣಸ್ವಾಮಿ ನೇತೃತ್ವದ ಸರ್ಕಾರ ಪತನವಾದ ಒಂದು ದಿನದ ಬಳಿಕ ಕೇಂದ್ರ ಸರ್ಕಾರ ವಿಧಾನಸಭೆಯನ್ನು ವಿಸರ್ಜಿಸಿ, ರಾಷ್ಟ್ರಪತಿ ಆಡಳಿತ ಜಾರಿ ಮಾಡಿದೆ.
ಮುಖ್ಯಮಂತ್ರಿ ನಾರಾಯಣಸ್ವಾಮಿ ನೇತೃತ್ವದ ಕಾಂಗ್ರೆಸ್‌ ಸರ್ಕಾರವು ಬಹುಮತ ಕಳೆದುಕೊಂಡು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಳಿಕ ಯಾವುದೇ ಪಕ್ಷ ಸರ್ಕಾರ ರಚನೆಗೆ ಮುಂದೆ ಬಾರದ ಹಿನ್ನೆಲೆಯಲ್ಲಿ ವಿಧಾನಸಭೆಯನ್ನು ವಿಸರ್ಜಿಸಿ ರಾಷ್ಟ್ರಪತಿ ಆಡಳಿತ ಜಾರಿ ಮಾಡಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ .
ಕೇಂದ್ರ ಸಚಿವ ಸಂಪುಟ ಸಭೆಯ ಬಳಿಕ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಈ ವಿಷಯ ತಿಳಿಸಿದ್ದಾರೆ.
ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ತಮಿಳ್ ಸಾಯಿ ಸೌಂದರಾಜನ್ ರಾಷ್ಟ್ರಪತಿ ಆಡಳಿತ ಜಾರಿಗೆ ಶಿಫಾರಸು ಮಾಡಿದ್ದರು. ಅವರ ವರದಿಯನ್ನುಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅಂಗೀಕಾರ ಮಾಡಿ ರಾಷ್ಟ್ರಪತಿಗಳಿಗೆ ಕಳುಹಿಸಿಕೊಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಇನ್ನು ಕೆಲವೇ ತಿಂಗಳಲ್ಲಿ ಪುದುಚರಿ ವಿಧಾನಸಭೆಗೆ ಚುನಾವಣೆ ನಡೆಯುತ್ತಿದ್ದು , ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ ಕೇರಳ ಈ ನಾಲ್ಕು ರಾಜ್ಯಗಳಿಗೆ ನಡೆಯಲಿರುವ ವಿಧಾನಸಭಾ ಚುನಾವಣೆಯ ಜೊತೆಗೆ ಪುದುಚೇರಿಯ ವಿಧಾನಸಭಾ ಚುನಾವಣೆ ನಡೆಯುವ ಸಾಧ್ಯತೆಯಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಖಾಲಿಸ್ತಾನಿಗಳಿಗೆ ಭಾರತದ ದಿಟ್ಟ ಪ್ರತ್ಯುತ್ತರ; ಲಂಡನ್‌ ಹೈಕಮಿಷನ್‌ ಕಟ್ಟಡ ಅಲಂಕರಿಸಿದ ಬೃಹತ್‌ ತ್ರಿವರ್ಣ ಧ್ವಜ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement