ಭ್ರಷ್ಟಾಚಾರ ವಿರೋಧಿ ಹೋರಾಟಗಾರ್ತಿ ಅಂಜಲಿ ಭಾರದ್ವಾಜ್‌ಗೆ ಅಮೆರಿಕ ಪ್ರಶಸ್ತಿ

ವಾಷಿಂಗ್ಟನ್‌: ಭಾರತದ ಭ್ರಷ್ಟಾಚಾರ ವಿರೋಧಿ ಹೋರಾಟಗಾರ್ತಿ ಅಂಜಲಿ ಭಾದಧ್ವಾಜ್‌ ಅವರಿಗೆ ಅಮೆರಿಕ ‘ಅಂತಾರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ಚಾಂಪಿಯನ್‌’ ಪ್ರಶಸ್ತಿ ನೀಡಿ ಗೌರವಿಸಿದೆ.
ಭ್ರಷ್ಟಾಚಾರದ ವಿರುದ್ದ ಸಮರ ಸಾರಿ, ಎಲ್ಲ ಸವಾಲುಗಳನ್ನು ಮೆಟ್ಟಿ ನಿಂತು, ಅಚಲವಾಗಿರುವವರಿಗೆ ನೀಡುವ ಪ್ರಶಸ್ತಿ ಇದಾಗಿದೆ ಎಂದು ಅಮೆರಿಕ ರಾಜ್ಯ ಕಾರ್ಯದರ್ಶಿ ಆಂಟನಿ ಬ್ಲಿಂಕೆನ್‌ ತಿಳಿಸಿದ್ದಾರೆ.
ವಿದೇಶದ ಒಟ್ಟು ಹನ್ನೆರಡು ಮಂದಿಗೆ ಈ ಪ್ರಶಸ್ತಿ ನೀಡಲಾಗಿದ್ದು, ಭಾರತದಿಂದ ಅಂಜಲಿ ಭಾರಧ್ವಾಜ್‌ ಆಯ್ಕೆಯಾಗಿದ್ದಾರೆ. ಸತ್ಯ, ಪಾರದರ್ಶಕತೆ ಮತ್ತೆ ಹೊಣೆಗಾರಿಕೆ ನಮ್ಮ ಬದ್ಧತೆಯಾಗಿದೆ. ಅದಕ್ಕೆ ಈ ಹನ್ನೆರಡು ಮಂದಿ ಉದಾರಹಣೆಯಾಗಿದ್ದಾರೆ. ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಲು ಅಂಜಲಿಯ ಹೋರಾಟವನ್ನು ನಾನು ಪ್ರಶಂಸಿಸುತ್ತೇನೆ ಎಂದು ಆಂಟನಿ ಬ್ಲಿಂಕೆನ್‌ ಹೇಳಿದ್ದಾರೆ.
ಕಳೆದ ಎರಡು ದಶಕಗಳಿಂದ ಮಾಹಿತಿ ಹಕ್ಕು ಕಾರ್ಯಕರ್ತೆಯಾಗಿರುವ ಅಂಜಲಿ, ಭ್ರಷ್ಟಾಚಾರ ವಿರುದ್ದದ ಹೋರಾಟಕ್ಕೆ ಸಾರ್ಥಕ್‌ ನಾಗರಿಕ್‌ ಸಂಘಟನ್ ಎನ್ನುವ ಸಂಸ್ಥೆಯನ್ನು ಹುಟ್ಟು ಹಾಕಿದ್ದಾರೆ. ಈ ಸಂಘಟನೆ ಮೂಲಕ ಜನರನ್ನು ಒಗ್ಗೂಡಿಸಿ ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಮಾಹಿತಿ ಹಕ್ಕು ರಾಷ್ಟ್ರೀಯ ಹೋರಾಟದ ಸಮನ್ವಯಕಿ ಆಗಿರುವ ಇವರು, 2013 ರಲ್ಲಿ ನಡೆದ ಭ್ರಷ್ಟಾಚಾರ ವಿರೋಧಿ ಆಂದೋಲನ, ಲೋಕಪಾಲ ಅಂದೋಲನದಲ್ಲಿ ಸಕ್ರೀಯವಾಗಿ ಭಾಗವಹಿಸಿದ್ದರು. ದೆಹಲಿಯಲ್ಲಿ ಶಿಕ್ಷಣ ಪೂರೈಸಿರುವ ಅಂಜಲಿ ಭಾರಧ್ವಾಜ್‌ ಅರ್ಥಶಾಸ್ತ್ರದಲ್ಲಿ ಪದವಿ ಪಡೆದಿದ್ದಾರೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಇಂದಿನ ಪ್ರಮುಖ ಸುದ್ದಿ :-   ಟರ್ಕಿ-ಸಿರಿಯಾ ಭೂಕಂಪ: 8,000ಕ್ಕೆ ಸಮೀಪಿಸಿದ ಸಾವಿನ ಸಂಖ್ಯೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

4.5 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ

advertisement