ಮಾ.೧ರಿಂದ ೨ನೇ ಹಂತದ ಲಸಿಕೆ ಆರಂಭ:೬೦ರ ಮೇಲ್ಪಟ್ಟವರಿಗೆ ಉಚಿತ

 

ನವ ದೆಹಲಿ: ದೇಶದಲ್ಲಿ ಮಾರ್ಚ್ ೧ರಿಂದ ಎರಡನೇ ಹಂತದ ಕೊವಿಡ್‌ ಲಸಿಕೆ ಹಾಕುವ ಅಭಿಯಾನ ಕೈಗೆತ್ತಿಕೊಳ್ಳಲು ಕೇಂದ್ರ ಸಚಿವ ಸಂಪುಟ ಸಮ್ಮತಿ ನೀಡಿದೆ.
45 ವರ್ಷ ದಾಟಿದ ಅನಾರೋಗ್ಯಪೀಡಿತರು ಮತ್ತು 60 ವರ್ಷ ದಾಟಿದ ಎಲ್ಲಾ ನಾಗರಿಕರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಲಸಿಕೆ ಹಾಕಲು ನಿರ್ಧರಿಸಲಾಗಿದೆ.ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ನಿರ್ಧಾರ ಕೈಗೊಳ್ಳಾಗಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದ್ದಾರೆ
ಮಾರ್ಚ್ 1ರಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಕೊವಿಡ್‌ ಲಸಿಕೆಯನ್ನು ಉಚಿತವಾಗಿ ಹಾಕಲಿದ್ದು ಖಾಸಗೀ ಆಸ್ಪತ್ರೆಗಳಲ್ಲಿ ಲಸಿಕೆ ಹಾಕಲು ದರ ನಿಗದಿಪಡಿಸಲಾಗಿದೆ. ಲಸಿಕೆ ಪಡೆಯಲು ಬಯಸುವವರು ಸರ್ಕಾರಿ ಅಥವಾ ಖಾಸಗಿ ಯಾವುದು ಬೇಕಾದರೂ ಆಯ್ಕೆ ಮಾಡಿಕೊಳ್ಳಬಹುದು
ಸದ್ಯ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಲಸಿಕೆಯನ್ನು ಹಾಕಲಾಗುತ್ತದೆ ಮುಂದೆ ದರ‌ ನಿಗದಿ ಮಾಡುವ ಸಂಬಂಧ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ಹಾಕಿಸಿಕೊಳ್ಳುವರಿಗೆ ಲಸಿಕೆ ಹಾಕಲು ಎಷ್ಟು ದರ ನಿಗದಿ ಪಡಿಸಬೇಕು ಎನ್ನುವ ಕುರಿತು ಶೀಘ್ರವೇ ನಿರ್ಧಾರ ಕೈಗೊಳ್ಳಲಾಗುವುದು, .ಜನವರಿ 16 ರಿಂದ ಆರಂಭವಾದ ಮೊದಲ ಹಂತದ ಲಸಿಕಾ ಅಭಿಯಾನದಲ್ಲಿ ಇದುವರೆಗೂ 1.10 ಕೋಟಿಗೂ ಕ್ಕೂ ಹೆಚ್ಚು ಜನರಿಗೆ ಲಸಿಕೆ ಹಾಕಲಾಗಿದೆ ಎಂದು ಅವರು ಹೇಳಿದರು

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ 2ನೇ ಹಂತದ ಮತದಾನ : ಶ್ರೀಮಂತ ಅಭ್ಯರ್ಥಿ ₹ 622 ಕೋಟಿ ಒಡೆಯ, ಅತ್ಯಂತ ಬಡ ಅಭ್ಯರ್ಥಿ ಬಳಿ ಇರುವುದು ಕೇವಲ...

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement