ಮೈಸೂರು ಮೇಯರ್‌ ಪಟ್ಟಕ್ಕಾಗಿ ಬಿಜೆಪಿಗೆ ಶಾಕ್‌ ಕೊಟ್ಟ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ

ಮೈಸೂರು: ಅಚ್ಚರಿಯ ಬೆಳವಣಿಗೆಯಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಒಂದಾಗಿ ಮೈಸೂರು ಮಹಾನಗರ ಪಾಲಿಕೆಯಲ್ಲಿ ಜೆಡಿಎಸ್ ಅಭ್ಯರ್ಥಿ ರುಕ್ಮಿಣಿ ಮಾದೇಗೌಡ ಮೇಯರ್‌ ಆಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಉಪಮೇಯರ್‌ ಆಗಿ  ಅನ್ವರ್‌ ಬೇಗ್‌ ಆಯ್ಕೆಯಾಗಿದ್ದಾರೆ.
ಅಚ್ಚರಿಯ ಬೆಳವಣಿಗೆಯಲ್ಲಿ ರಾಜ್ಯದಲ್ಲಿ ಹಾವು ಮುಂಗುಸಿಯಂತಾಗಿದ್ದ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಕೊನೆಯ ಕ್ಷಣದಲ್ಲಿ ಹೊಂದಾಣಿಕೆ ಮಾಡಿಕೊಂಡಿದ್ದು, ಬಿಜೆಪಿಗೆ ಈ ಬೆಳವಣಿಗೆಯಿಂದ ಹಿನ್ನಡೆಯಾಗಿದೆ.
ರಾಜ್ಯದಲ್ಲಿ ಕೆಲವು ದಿನಗಳಿಂದ ಕಾಂಗ್ರೆಸ್ – ಜೆಡಿಎಸ್ ನಾಯಕರ ಮಧ್ಯೆ ಆರೋಪ-ಪ್ರತ್ಯಾರೋಪ ತೀವ್ರವಾಗಿತ್ತು. ಇತ್ತೀಚಿಗೆ ವಿಧಾನ ಪರಿಷತ್‌ನಲ್ಲಿ ಜೆಡಿಎಸ್‌ ಕಾಂಗ್ರೆಸ್‌ಗೆ ಬೆಂಬಲ ನೀಡದ ಕಾರಣ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಬಲದಿಂದ ಆಯ್ಕೆಯಾಗಿದ್ದ ಪ್ರತಾಪಚಂದ್ರ  ಶೆಟ್ಟಿ ಅವರು ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿಯಿಂದಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು. ಅನಂತರ ಜೆಡಿಎಸ್‌-ಬಿಜೆಪಿ ಮೈತ್ರಿ ಅಭ್ಯರ್ಥಿ ಬಸರವಾಜ ಹೊಟ್ಟಿ ಸಭಾಪತಿಯಾಗಿ ಆಯ್ಕೆಯಾಗಿದ್ದರು. ಹೀಗಾಗಿ ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಸಂಬಂಧ ಹಾಳಾಗಿದೆ ಎಂದೇ ವಿಶ್ಲೇಷಿಸಲಾಗಿತ್ತು.ಇದಕ್ಕೆ ಪುಷ್ಟಿ ನೀಡುವಂತೆ ಸಿದ್ದರಾಮಯ್ಯ ಮತ್ತು ಎಚ್.ಡಿ.ಕುಮಾರಸ್ವಾಮಿ ಆರೋಪ -ಪ್ರತ್ಯಾರೋಪ ಮಾಡಿಕೊಂಡಿದ್ದರು. ನಿನ್ನೆ-ಮೊನ್ನೆಯ ವರೆಗೂ ಮೈಸೂರು ಪಾಲಿಕೆಯಲ್ಲಿ ಜೆಡಿಎಸ್‌ ಹಾಗೂ ಬಿಜೆಪಿ ಮೈತ್ರಿಯಾಗಬಹುದು ಎಂದು ರಾಜಕೀಯ ವಲಯದಲ್ಲಿ ಚರ್ಚೆ ನಡೆದಿತ್ತು.
ಆದರೆ ಆಗಿದ್ದೇ ಬೇರೆ. ಕಳೆದ ಸಲ ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಮೈತ್ರಿ ಒಪ್ಪಂದಂತೆ ಈಸಲ ಮೇಯರ್‌ ಸ್ಥಾನವನ್ನು ಜೆಡಿಎಸ್‌ ಅದನ್ನು ಕಾಂಗ್ರೆಸ್‌ಗೆ ಬಿಟ್ಟುಕೊಡಬೇಕಾಗಿದ್ದರೂ ಹಳೆಮೈಸೂರು ಭಾಗದಲ್ಲಿ ಬಿಜೆಪಿಯನ್ನು ಹೊರಗಿಡುವ ಉದ್ದೇಶದಿಂದ ಎಂಟ್ರಿ ಹೊಡೆದ ಕೆಪಿಸಿಸಿ ಅಧ್ಯಕ್ಷ ಡಿ.ಕೆಶಿವಕುಮಾರ
ಮತ್ತೆ ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಮೈತ್ರಿಗೆ ಕಾರಣರಾದರು. ಜೆಡಿಎಸ್‌ಗೆ ಮತ್ತೆ ಮೇಯರ್‌ ಪಟ್ಟ ಬಿಟ್ಟುಕೊಟ್ಟ ಕಾಂಗ್ರೆಸ್‌ ಉಪ ಮೇಯರ್‌ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ 2024: ಕರ್ನಾಟಕದ 14 ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

4.3 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement