ಯತ್ನಾಳ ದಿಢೀರ್‌ ದೆಹಲಿ ಭೇಟಿ ಕಾರಣ ಬಹಿರಂಗ

posted in: ರಾಜ್ಯ | 0

ಶಾಸಕ ಬಸನಗೌಡ ಪಾಟೀಲ ಯತ್ನಾಳ ದೆಹಲಿಗೆ ಭೇಟಿ ನೀಡಿದ ಕಾರಣ ಬಹಿರಂಗಗೊಂಡಿದೆ. ವಿಜಯಪುರದ ಶ್ರೀ ಸಿದ್ದೆಶ್ವರ ಸಂಸ್ಥೆಯ ಅಡಿಯಲ್ಲಿ ನಿರ್ಮಿಸಲಾದ ಭಾರತ ರತ್ಬ ಅಟಲ್‌ ಬಿಹಾರಿ ವಾಜಪೇಯಿ ಶಿಶು ನಿಕೇತನ ಶಾಲೆಯ ಸಿಬಿಎಸ್‌ಇ ನೋಂದಣಿ ಕಾರ್ಯಕ್ಕಾಗಿ ಯತ್ನಾಳ ದೆಹಲಿಗೆ ಹೋಗಿದ್ದಾರೆ. ಪಕ್ಷದ ಹೈಕಮಾಂಡ್‌ನಿಂದ ಯಾವುದೇ ಬುಲಾವ್‌ ಬಂದಿಲ್ಲ. ಯಾವುದೇ ಮುಖಂಡರನ್ನು ಭೇಟಿ ಮಾಡಲು ಹೋಗಿಲ್ಲ ಎಂದು ಯತ್ನಾಳ ಸ್ಪಷ್ಟಪಡಿಸಿದ್ದಾರೆ.

advertisement

ವಾಜಪೇಯಿ ಹಾಗೂ ಮೋದಿ ಸಂಕಲ್ಪದ ಭ್ರಷ್ಟಾಚಾರ ಮುಕ್ತ ಭಾರತ ಹಾಗೂ ಕುಟುಂಬ ರಾಜಕಾರಣ ಮುಕ್ತ ಭಾರತದ ಸಂಕಲ್ಪಕ್ಕಾಗಿ ನನ್ನ ಹೋರಾಟ. ನಾನು ಪಕ್ಷದ ವಿರುದ್ಧ ಏನನ್ನೂ ಮಾತನಾಡಿಲ್ಲ. ಹಿಂದೂ ಸಮಾಜದಲ್ಲಿನ ಸಾಮಾಜಿಕ ನ್ಯಾಯಕ್ಕಾಗಿ ನಡೆಯುತ್ತಿರುವ ನನ್ನ ಹೋರಾಟ ನಿಲ್ಲುವುದಿಲ್ಲ. ನಾನು ಅಂಜುವುದಿಲ್ಲ, ಯಾರಿಗೂ ತಲೆ ಬಾಗುವುದಿಲ್ಲ. ಪಲಾಯನ ಇಲ್ಲವೇ ಇಲ್ಲ ಎಂದು ತಿಳಿಸಿದ್ದಾರೆ.

ರಾಜ್ಯದ ಇಬ್ಬರು ಸಚಿವರು ಸುದ್ದಿಗೋಷ್ಠಿ ನಡೆಸಿ ನನ್ನ ವಿರುದ್ಧ ಹಾಗೂ ಪೂಜ್ಯರ ವಿರುದ್ಧ ಮಾತನಾಡಿದ್ದಾರೆ. ರಾಜ್ಯಕ್ಕೆ ಬಂದ ನಂತರ ಅದಕ್ಕೆ ಸೂಕ್ತ ಉತ್ತರ ನೀಡುತ್ತೇನೆ ಎಂದು ಹೇಳಿದರು.

ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ನಿಮ್ಮ ಕಾಮೆಂಟ್ ಬರೆಯಿರಿ

advertisement