ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸದಿದ್ದರೆ ರೈತರು ೪೦ ಲಕ್ಷ ಟ್ರಾಕ್ಟರ್‌ಗಳೊಂದಿಗೆ ಸಂಸತ್ತಿನ ಮುಂದೆ ಮೆರವಣಿಗೆ ನಡೆಸಲಾಗುವುದು ಎಂದು ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್ ಕೇಂದ್ರ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ರಾಜಸ್ಥಾನದ ಸಿಕಾರ್‌ನಲ್ಲಿ ನಡೆದ ರೈತರ ರ್ಯಾಲಿಯಲ್ಲಿ ಮಾತನಾಡಿದ ಟಿಕಾಯತ್, ಸಂಸತ್ತಿನ ಎದುರು ಟ್ರಾಕ್ಟರ್‌ಗಳ ಮೆರವಣಿಗೆ ನಡೆಸಲಾಗುವುದು. ಈ ಬಾರಿ ಅದು ಕೇವಲ 4 ಲಕ್ಷ ಟ್ರಾಕ್ಟರ್‌ಗಳಲ್ಲ, 40 ಲಕ್ಷ ಟ್ರಾಕ್ಟರುಗಳು ಪಾಲ್ಗೊಳ್ಳಲಿವೆ ಕೃಷಿ ಕಾನೂನುಗಳನ್ನು ಹಿಂದಕ್ಕೆ ಪಡೆದುಕೊಳ್ಳುವವರೆಗೂ ಹೋರಾಟ ನಡೆಯಲಿದೆ. ಪಶ್ಚಿಮ ಬಂಗಾಳದಲ್ಲಿ ಟ್ರ್ಯಾಕ್ಟರ್ ರ್ಯಾಲಿಯನ್ನು ನಡೆಸುವ ಮಾತುಕತೆ ನಡೆಯುತ್ತಿದೆ ಎಂದು ಹೇಳಿದರು.
advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ನಿಮ್ಮ ಕಾಮೆಂಟ್ ಬರೆಯಿರಿ