ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆಯ ಹಿರೇನಾಗವಲ್ಲಿ ಕ್ವಾರಿಯಲ್ಲಿ ಸಂಭವಿಸಿದ ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಡಿಬಂಡೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಗೋಪಾಲ ರೆಡ್ಡಿ ಅವರನ್ನು ರಾಜ್ಯ ಸರ್ಕಾರ ಅಮಾನತು ಮಾಡಿ ಆದೇಶ ಹೊರಡಿಸಿದೆ.
ಸ್ಫೋಟ ಪ್ರಕರಣದ ತನಿಖೆ ಮತ್ತು ಆರೋಪಿಗಳನ್ನು ಪತ್ತೆ ಮಾಡುವಲ್ಲಿ ತೋರಿದ ಅತೀವ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿತನದಿಂದಾಗಿ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಆದೇಶ ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಕಲ್ಲುಕ್ವಾರಿಯ ಮೇಲೆ ದಾಳಿ ನಡೆದ ನಂತರ ಆರೋಪಿಗಳನ್ನು ದಸ್ತಗಿರಿ ಮಾಡಲು ಪಿಎಸ್‌ಐ ಗೋಪಾಲ ರೆಡ್ಡಿ ಪ್ರಾಮಾಣಿಕ ಪ್ರಯತ್ನ ಮಾಡಿರಲಿಲ್ಲ. ಪ್ರಕರಣ ದಾಖಲಿಸಿದ ಬಗ್ಗೆ ಪೊಲೀಸ್ ಐಟಿ ತಂತ್ರಾಂಶದಲ್ಲಿ ನಮೂದಿಸಿಲ್ಲ. ಪ್ರಕರಣದ ತನಿಖೆ ನಡೆಸದೆ ಫೆ. ೨೧ ಮತ್ತು ೨೨ ರಂದು ರಜೆ ಮೇಲೆ ತೆರಳಿರುತ್ತೀರಿ. ಅರೋಪಿಗಳನ್ನು ದಸ್ತಗಿರಿ ಮಾಡದೆ ಇದ್ದಿದ್ದರಿಂದ ಈ ಸ್ಫೋಟ ಸಂಭವಿಸಿದೆ.
ಆರೋಪಿ ನಾಗರಾಜ ಸೂಚನೆ ಮೇರೆಗೆ ಅಕ್ಕಿ ಚೀಲದಲ್ಲಿ ಸ್ಫೋಟಕ ಸಾಗಿಸಲಾಗುತ್ತಿತ್ತು. ಆ ಸಂದರ್ಭದಲ್ಲಿ ಈ ಸ್ಫೋಟ ಸಂಭವಿಸಿ ೬ ಜನ ಮೃತಪಟ್ಟಿದ್ದಾರೆ. ಆರೋಪಿಗಳನ್ನು ಪತ್ತೆ ಮಾಡುವಂತೆ ಅಧೀನ ಸಿಬ್ಬಂದಿಗೂ ಸೂಚನೆ ನೀಡಿಲ್ಲ. ಆರೋಪಿಗಳನ್ನು ಸೂಕ್ತ ಸಂದರ್ಭದಲ್ಲಿ ದಸ್ತಗಿರಿ ಮಾಡಿದ್ದರೆ ಈ ದುರ್ಘಟನೆ ಸಂಭವಿಸುತ್ತಿರಲಿಲ್ಲ. ಕರ್ತವ್ಯ ನಿರ್ವಹಣೆಯಲ್ಲಿ ಅತೀವ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನ ತೋರಿದ ಕಾರಣಗಳಿಂದಾಗಿ ಅಮಾನತುಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
___________
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ