ಸರ್ಕಾರಿ ನೌಕರರ ವಿರುದ್ಧ ಅನಾಮಧೇಯ ದೂರು ವಿಚಾರಣೆಗೆ ಸಿಎಂ ಲಗಾಮು

ಬೆಂಗಳೂರು:ರಾಜ್ಯ ಸರ್ಕಾರಿ ಅಧಿಕಾರಿ, ನೌಕರರು ಮುಕ್ತ ಮತ್ತು ನಿರ್ಭೀತಿಯಿಂದ ಕರ್ತವ್ಯ ನಿರ್ವಹಿಸಲು ಹಾಗೂ ಆಡಳಿತ ವ್ಯವಸ್ಥೆಯಲ್ಲಿನ ಕಾನೂನಿನ ದುರುಪಯೋಗ ತಡೆಗಟ್ಟುವ ಉದ್ದೇಶದಿಂದ ಸರ್ಕಾರಿ ನೌಕರರ ವಿರುದ್ದ ಅನಾಮಧೇಯ ದೂರುಗಳ ತನಿಖೆಗೆ ಏಕಾಏಕಿ ಒಳಪಡಿಸಬಾರದು ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.
ದೂರು ಹೆಚ್ಚಾಗುತ್ತಿರುವುದು ನೌಕರರ ಆತ್ಮಸ್ಥೈರ್ಯ ಕಳೆದುಕೊಳ್ಳುವಂತಾಗಿದೆ, ಹೀಗಾಗಿ ಏಕಾಏಕೀ ತನಿಖೆಗೆ ಆದೇಶ ನೀಡದಂತೆ ಸೂಚಿಸಿದ್ದಾರೆ.
ಮುಖ್ಯ ಕಾರ್ಯದರ್ಶಿ ರವಿಕುಮಾರ ಅವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ಬಗ್ಗೆ ಪತ್ರ ಬರೆದಿದ್ದಾರೆ. ಪೂರ್ಣ ವಿಳಾಸ ಸಹಿತ ಇರುವ ದೂರುಗಳನ್ನು ತನಿಖೆಗೆ, ವಿಚಾರಣೆಗೆ ಪರಿಗಣಿಸುವುದು ಎಂಬುದನ್ನು ಮಾರ್ಪಡಿಸಿ, ದೂರು ನೀಡಿರುವ ವ್ಯಕ್ತಿಯ ಹೆಸರು ಮತ್ತು ವಿಳಾಸ ಖಚಿತಪಡಿಸಿಕೊಂಡು ದೂರುದಾರರು ಅಗತ್ಯ ದಾಖಲೆಗಳನ್ನು ಒದಗಿಸಿದ ಬಳಿಕ, ಆರೋಪ ಮೇಲ್ನೋಟಕ್ಕೆ ಸರಿ ಎಂದು ಕಂಡುಬಂದರೆ ಮಾತ್ರ ವಿಚಾರಣೆಗೆ ಪರಿಗಣಿಸಲು ಆದೇಶ ಹೊರಡಿಸುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ.

 

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement