ಚಿಕ್ಕಬಳ್ಳಾಪುರ ಜಿಲೆಟಿನ್‌ ಸ್ಫೋಟ: ಬಿಜೆಪಿ ಮುಖಂಡನ ಬಂಧನ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ಹಿರೇನಾಗವೇಲಿ ಬಳಿ ಸಂಭವಿಸಿದ ಜಿಲೆಟಿನ್ ಸ್ಫೋಟ ದುರಂತಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಬಿಜೆಪಿ ಮುಖಂಡ ಗುಡಿಬಂಡೆ ನಾಗರಾಜ್‌ನನ್ನು ಪೊಲೀಸರು ಬಂಧಿಸಿದ್ದಾರೆ.
ಕ್ವಾರಿಯ ಮಾಲೀಕರಲ್ಲೊಬ್ಬನಾದ ಗುಡಿಬಂಡೆ ನಾಗರಾಜ್‌ನನ್ನು ಪೊಲೀಸರು ಬಂಧಿಸಿದ್ದು, ನಾಗರಾಜ್ ಜೊತೆ ಬಾಂಬ್ ಸ್ಫೋಟಕಕಾರ ತಮಿಳುನಾಡು ಮೂಲದ ಗಣೇಶ್ ಎಂಬಾತನನ್ನೂ ಬಂಧಿಸಲಾಗಿದೆ. ಒಟ್ಟು ಈವರೆಗೆ 8 ಆರೋಪಿಗಳನ್ನು ಬಂಧಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಅಧಿಕಾರಿಗಳನ್ನೂ ಅಮಾನತು ಮಾಡಲಾಗಿದ್ದು, ಗುಡಿಬಂಡೆ ಸಬ್ ಇನ್ಸ್‌ಪೆಕ್ಟರ್‌ ಗೋಪಾಲ ರೆಡ್ಡಿ ಮತ್ತು ಇನ್ಸಪೆಕ್ಟರ್ ಮಂಜುನಾಥ್ ಸಸ್ಪೆಂಡ್ ಆದ ಪೊಲೀಸ್ ಅಧಿಕಾರಿಗಳು. ಇನ್ನು ಬಂಧಿಸಲ್ಪಟ್ಟಿರುವ ಉಳಿದ 8 ಆರೋಪಿಗಳ ಪೈಕಿ ಪ್ರಮುಖ ಆರೋಪಿ ನಾಗರಾಜ್, ರಿಯಾಜ್, ಮಧುಸೂದನ್ ರೆಡ್ಡಿ, ಪ್ರವೀಣ್, ವೆಂಕಟೇಶ ರಡ್ಡಿ, ರಾಘವೇಂದ್ರ ರಡ್ಡಿ, ಗಣೇಶ್ ಮತ್ತು ವೆಂಕಟಶಿವರೆಡ್ಡಿ ಸೇರಿದ್ದಾರೆ.
ಚಿಕ್ಕಬಳ್ಳಾಪುರ ತಾಲೂಕಿನ ಮಂಡಿಕಲ್‌ ಹೋಬಳಿಯ ಹಿರೇನಾಗವೇಲಿ ಗ್ರಾಮದ ಬಳಿಯ ಕ್ವಾರಿಯಲ್ಲಿ ಈ ದುರ್ಘಟನೆ ಸಂಭವಿಸಿತ್ತು. ಭಾರೀ ಸ್ಪೋಟಕ್ಕೆ ಮೃತ ದೇಹಗಳು ಛಿದ್ರ ಛಿದ್ರವಾಗಿ ದೇಹಗಳ ಭಾಗಗಳು ಚೆಲ್ಲಾಪಿಲ್ಲಿಯಾಗಿತ್ತು. ಗುಡಿಬಂಡೆ ನಾಗರಾಜ್, ರಾಘವೇಂದ್ರ, ಗಂಗೋಜಿರಾವ್ ಸೇರಿದಂತೆ ನಾಲ್ವರ ಒಡೆತನದ ಭ್ರಮರವರ್ಷಿಣಿ ಕ್ವಾರಿಗೆ ಫೆಬ್ರವರಿ 7ರಂದು ದಾಳಿ ನಡೆಸಿ ಅಕ್ರಮ ಸ್ಫೋಟಕ ಜಪ್ತಿ ಮಾಡಿ ಗುಡಿಬಂಡೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.

ಇಂದಿನ ಪ್ರಮುಖ ಸುದ್ದಿ :-   ನಾಗಮಂಗಲ ಬಳಿ ಕೆಎಸ್ ಆರ್ ಟಿಸಿ ಬಸ್ಸಿಗೆ ಕಾರು ಡಿಕ್ಕಿ : ನಾಲ್ವರು ಸ್ಥಳದಲ್ಲೇ ಸಾವು

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

4.5 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement