ತಿಂಗಳಿಗೊಮ್ಮೆ ರಾಜ್ಯದಲ್ಲಿ ಸ್ಫೋಟಕಗಳ ಆಡಿಟ್:ಬೊಮ್ಮಾಯಿ

ದಾವಣಗೆರೆ:ರಾಜ್ಯದಲ್ಲಿನ ಸ್ಫೋಟಕಗಳನ್ನು ಪತ್ತೆ ಹಚ್ಚಲು ಎಲ್ಲ ಗಣಿಗಾರಿಕೆ ಕೇಂದ್ರಗಳ ಮೇಲೆ ವಿಶೇಷ ಕಾರ್ಯಾಚರಣೆ ಮಾಡಿ ಒಟ್ಟಾರೆ ಸ್ಪೋಟಕಗಳ ಆಡಿಟ್ ಮಾಡಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಗುರುವಾರ ದಾವಣಗೆರೆಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಗಣಿ ಮತ್ತು ಗೃಹ ಇಲಾಖೆ ಅಧಿಕಾರಿಗಳ ತಂಡಗಳು ಜಂಟಿಯಾಗಿ ಈ ಕಾರ್ಯಾಚರಣೆ ಮಾಡಲಿವೆ ಎಂದರು.
ರಾಜ್ಯದಲ್ಲಿನ ಹಲವಾರು ಗಣಿಗಾರಿಕೆ ಕೇಂದ್ರಗಳಿವೆ. ಅವುಗಳ ಪೈಕಿ ಅಕ್ರಮ ಮತ್ತು ಸಕ್ರಮ ಗಣಿಗಾರಿಕೆ ಕೇಂದ್ರಗಳೂ ಇವೆ.  ಈ ಎಲ್ಲಾ ಗಣಿಗಾರಿಕೆ ಕೇಂದ್ರಗಳ ವಿರುದ್ಧ ಜಂಟಿ ಕಾರ್ಯಾಚರಣೆ ಆರಂಭ ಮಾಡುತ್ತೇವೆ. ಇದುವರೆಗೆ ೩ ತಿಂಗಳಿಗೆ ಒಮ್ಮೆ ಗಣಿಗಾರಿಕೆ ಕೇಂದ್ರಗಳನ್ನು ತಪಾಸಣೆ ಮಾಡಲಾಗುತ್ತಿತ್ತು. ಈಗ ಆ ನಿಯಮವನ್ನು ಕಠಿಣಗೊಳಿಸಿ ವಿಶೇಷ ಸುತ್ತೋಲೆ ಹೊರಡಿಸಲಾಗಿದೆ. ಇನ್ನು ಮುಂದೆ ೧೫ ದಿನಗಳಿಂದ ೧ ತಿಂಗಳ ಅವಧಿಯಲ್ಲಿ ಒಂದು ಬಾರಿ ರಾಜ್ಯದ ಎಲ್ಲ ಗಣಿಗಾರಿಕೆ ಕೇಂದ್ರಗಳನ್ನು ತಪಾಸಣೆ ಮಾಡುತ್ತೇವೆ. ಅಲ್ಲಿ ಸಂಗ್ರಹಿಸಿರುವ ಅಕ್ರಮ- ಸಕ್ರಮ ಸ್ಪೋಟಕಗಳನ್ನು ಪತ್ತೆ ಮಾಡುತ್ತೇವೆ. ಅಕ್ರಮವಾಗಿದ್ದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ ಎಂದು ಬೊಮ್ಮಾಯಿ ಹೇಳಿದರು.
ಒಟ್ಟರೆ ರಾಜ್ಯದಲ್ಲಿ ಎಕ್ಸ್ ಪ್ಲೋಸಿವ್ ಗಳ ಆಡಿಟ್ ಮಾಡುತ್ತೇವೆ. ಈ ಜಂಟಿ ಕಾರ್ಯಾಚರಣೆ ಬಗ್ಗೆ ಗಣಿ ಸಚಿವ ಮುರುಗೇಶ ನಿರಾಣಿ ಜತೆ ಚರ್ಚಿಚಿಸಲಾಗಿದೆ ಎಂದು ಹೇಳಿದ ಬಸವರಾಜ ಬೊಮ್ಮಾಯಿ
ಎನ್‌ಐಎ ಚಾರ್ಜ್‌ಶೀಟ್‌: ಡಿಜೆ ಹಳ್ಳಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ತನ್ನ ಚಾರ್ಜ್ ಶೀಟ್ ನ್ನು ಸಲ್ಲಿಸಿದೆ.
ಈ ಪೊಲೀಸ್ ಠಾಣೆ ಮೇಲೆ ದಾಳಿ ನಡೆದಿದ್ದು ಹೇಗೆ ಎಂಬುದು ಈಗ ಎಲ್ಲರಿಗೂ ಗೊತ್ತಾಗಿದೆ‌. ಇದೇ ವಿಷಯವನ್ನು ನಾವು ವಿಧಾನಸಭೆಯಲ್ಲೂ ಹೇಳಿದ್ದೆವು.ಅದನ್ನೇ ಎನ್ಐಎ ತನ್ನ ವರದಿಯಲ್ಲಿ ಹೇಳಿದೆ. ಈ ಕೃತ್ಯ ಎಸಗಲು ಸಾಮಾಜಿಕ ಜಾಲತಾಣವನ್ನು ದುರುಪಯೋಗ ಮಾಡಿಕೊಳ್ಳಲಾಗಿದೆ. ಈ ಕುರಿತು ಕೋರ್ಟ್ ತನ್ನ ಆದೇಶ ನೀಡಲಿದೆ ಎಂದು ಬೊಮ್ಮಾಯಿ ಹೇಳಿದರು.
ಮೀಸಲಾತಿ, ಕಾನೂನು ಚೌಕಟ್ಟಿನಲ್ಲಿ ಚರ್ಚೆ:
ಹಲವಾರು ಸಮುದಾಯಗಳು ಮೀಸಲಾತಿಗೆ ಮನವಿ ಮಾಡಿವೆ. ಇವರೆಲ್ಲರ ಮನವಿಗಳನ್ನು ಹಿಂದುಳಿದ ವರ್ಗಗಳ ಶಾಶ್ವತ ಆಯೋಗಕ್ಕೆ ಕಳಿಸಲಾಗಿದೆ‌. ಮೀಸಲಾತಿ ಸೌಲಭ್ಯ ಕಲ್ಪಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಕ್ರಮ ಕೈಗೊಂಡಿದ್ದಾರೆ. ತಜ್ಞ ರ ಜತೆ ಸಮಾಲೋಚನೆ ಮಾಡಲಾಗುವುದು.  ಎಲ್ಲ ವರ್ಗಗಳ ಜನರಿಗೆ ನ್ಯಾಯ ಕೊಡಿಸಲು ಮುಖ್ಯಮಂತ್ರಿಗಳು ಬದ್ಧರಾಗಿದ್ದಾರೆ. ತಮಿಳುನಾಡಿನಲ್ಲಿ ಒಬಿಸಿಗೆ ನೀಡಿರುವ ಮೀಸಲಾತಿ ಪ್ರಮಾಣದ ಬಗ್ಗೆ ನಮಗೆ ಗೊತ್ತಿದೆ. ಬದಲಾದ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಯಲ್ಲಿ ಮೀಸಲಾತಿ ನೀಡುವ ಕುರಿತು ಕಾನೂನಿನ ಚೌಕಟ್ಟಿನಲ್ಲಿ‌ ಚರ್ಚೆ ಮಾಡಿ ನಿರ್ಧಾರ ಮಾಡಲಾಗುವುದು ಎಂದು ಬಸವರಾಜ ಬೊಮ್ಮಾಯಿ ಸ್ಪಷ್ಟ ಪಡಿಸಿದರು.

ಇಂದಿನ ಪ್ರಮುಖ ಸುದ್ದಿ :-   ವಂಚನೆ ಪ್ರಕರಣ: ಆರೋಪಿ ಚೈತ್ರಾ ಹೆಸರಿನೊಂದಿಗೆ ʼಕುಂದಾಪುರʼ ಬಳಸದಂತೆ ಕೋರ್ಟ್‌ ನಿರ್ಬಂಧ

 

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

4.5 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement