ಪಂಚಮಸಾಲಿ ಸಮಾಜ ೨ಎಗೆ ಸೇರ್ಪಡೆ: ಇಂದು ಸಂಜೆ ಮಹತ್ವದ ಸಭೆ

posted in: ರಾಜ್ಯ | 0

ಬೆಂಗಳೂರು: ಲಿಂಗಾಯಿತ ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರ್ಪಡೆ ಮಾಡಲೇಬೇಕೆಂಬ ಹಿನ್ನೆಲೆಯಲ್ಲಿ ಮುಂದೆ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಇಂದು (ಫೆ.೨೫ರಂದು) ಸಂಜೆ ಮಹತ್ವದ ಸಭೆ ಇಲ್ಲಿ ನಡೆಯಲಿದೆ.
ಈ ಸಭೆಗೆ ಸಚಿವರು, ಶಾಸಕರು, ಸಮಾಜದ ಮುಖಂಡರು ಸೇರಿದಂತೆ ಅನೇಕರನ್ನು ಕೂಡಲಸಂಗಮ ಮಠದ ಜಯ ಮೃತ್ಯುಂಜಯ ಸ್ವಾಮೀಜಿಗಳು ಆಹ್ವಾನಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ರಾಷ್ಟ್ರೀಯ ಘಟಕದ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್, ಮಹತ್ವದ ಸಭೆ ಕರೆದಿದ್ದು ಸಭೆಯಲ್ಲಿ ರಾಜ್ಯ, ಜಿಲ್ಲೆ ಹಾಗೂ ತಾಲೂಕು ಘಟಕಗಳ ಅಧ್ಯಕ್ಷರು ಭಾಗವಹಿಸಲಿದ್ದಾರೆಂದು ತಿಳಿದುಬಂದಿದೆ.
ಭಾನುವಾರದ ಬೆಳವಣಿಗೆ ನಂತರ ಪ್ರತಿಭಟನೆಯಿಂದ ಹರಿಹರ ಪಂಚಮಸಾಲಿ ಮಠದ ಶ್ರೀ ವಚನಾನಂದ ಸ್ವಾಮೀಜಿ, ಸಚಿವರಾದ ಸಿ.ಸಿ.ಪಾಟೀಲ್, ಮುರುಗೇಶ್ ನಿರಾಣಿ ಹಾಗೂ ಆ ಸಮುದಾಯವನ್ನು ಪ್ರತಿನಿಧಿಸುವ ಅನೇಕ ಶಾಸಕರು ಅಂತರವನ್ನು ಕಾಪಾಡಿಕೊಂಡಿದ್ದಾರೆ. ಹೀಗಾಗಿ ಸಂಜೆ ನಡೆಯಲಿರುವ ಸಭೆ ಕುತೂಹಲ ಮೂಡಿಸಿದೆ.
ಕೂಡಲಸಂಗಮ ಪೀಠಾಧ್ಯಕ್ಷ ಜಯಮೃತ್ಯುಂಜಯ ಸ್ವಾಮೀಜಿ, ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಅವರ ಜೊತೆ ಸಚಿವರಾದ ಬೊಮ್ಮಾಯಿ ಹಾಗೂ ಸಿ.ಸಿ.ಪಾಟೀಲ್ ಸಭೆ ನಡೆಸಿ ಮಾತುಕತೆ ನಡೆಸಿದ್ದರು. ಸರ್ಕಾರ ಮನವೂಲಿಕೆ ನಂತರವೂ ಮೀಸಲಾತಿ ಪಟ್ಟು ಬಗೆಹರಿಯುವ ಲಕ್ಷಣಗಳು ಗೋಚರಿಸುತ್ತಿಲ್ಲ.
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಆರಂಭವಾಗಿರುವ ಧರಣಿ ಸತ್ಯಾಗ್ರಹ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.
ಮಾರ್ಚ್ 4ರವರೆಗೂ ಇದೇ ರೀತಿ ಪ್ರತಿಭಟನೆ ನಡೆಸಲಿದ್ದೇವೆ.ಸರ್ಕಾರ ನಮ್ಮ ಆಗ್ರಹಗಳನ್ನು ಈಡೇರಿಸದೇ ಹೋದಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತದೆ. ನಿಗದಿತ ಸಮಯದೊಳಗಾಗಿ ಮೀಸಲಾತಿ ನೀಡುವುದಾಗಿ ಮುಖ್ಯಮಂತ್ರಿಗಳು ಲಿಖಿತ ಭರವಸೆ ನೀಡಿದರೆ ಮಾತ್ರ ಪ್ರತಿಭಟನೆಯಿಂದೆ ಹಿಂದೆ ಸರಿಯಲಾಗುತ್ತದೆ ಎಂದು ತಿಳಿಸಿದ್ದಾರೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಇಂದಿನ ಪ್ರಮುಖ ಸುದ್ದಿ :-   2022ರಲ್ಲಿ ಬೆಂಗಳೂರು ವಿಮಾನ ನಿಲ್ದಾಣದಿಂದ 2.75 ಕೋಟಿ ಮಂದಿ ಪ್ರಯಾಣ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

/ 5. ಒಟ್ಟು ವೋಟುಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement