ಬಿಜೆಪಿ ಸೇರಿದ ಬಂಗಾಳ ನಟಿ ಪಾಯಲ್‌ ಸರ್ಕಾರ್‌

ಕೋಲ್ಕತ್ತ: ಬಂಗಾಳಿ ನಟಿ ಪಾಯಲ್‌ ಸರ್ಕಾರ್‌ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಬಿಜೆಪಿಯ ರಾಜ್ಯ ಪಕ್ಷದ ಮುಖ್ಯಸ್ಥ ದಿಲೀಪ್ ಘೋಷ್ ಮತ್ತು ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಉಪಸ್ಥಿತಿಯಲ್ಲಿ ಕೇಸರಿ ಪಕ್ಷಕ್ಕೆ ಸೇರಿಕೊಂಡರು.
ಕಳೆದ ವಾರ ಜನಪ್ರಿಯ ಬಂಗಾಳಿ ನಟ ಯಶ್ ದಾಸ್‌ಗುಪ್ತಾ ಅವರು ಬಿಜೆಪಿಗೆ ಸೇರಿದರು. ೨ ದಿನಗಳ ಹಿಂದೆ ಮಾಜಿ ಕ್ರಿಕೆಟಿಗ ಅಶೋಕ ದಿಂಡಾ ಕೋಲ್ಕತ್ತದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಎಪ್ರಿಲ್‌-ಮೇ ತಿಂಗಳಲ್ಲಿ ನಡೆಯುವ ವಿಧಾನಸಭಾ ಚುನಾಔಣೆಯಲ್ಲಿ ಆಡಳಿತಾರೂಢ ಟಿಎಂಸಿಗೆ ಬಿಜೆಪಿ ಪ್ರಬಲ ಪೈಪೋಟಿ ನೀಡಬೇಕೆನ್ನುವ ಉದ್ದೇಶದಿಂದ ರಾಜ್ಯದಲ್ಲಿ ಭರ್ಜರಿ ಪ್ರಚಾರ ನಡೆಸುತ್ತಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕಾಂಗ್ರೆಸ್ಸಿಗೆ ರಾಜೀನಾಮೆ ನೀಡಿದ 35 ವರ್ಷಗಳಿಂದ ಪಕ್ಷದಲ್ಲಿದ್ದ ಪ್ರಿಯಾಂಕಾ ಗಾಂಧಿ ಆಪ್ತ ತಜೀಂದರ್ ಸಿಂಗ್ ಬಿಟ್ಟು...!

ನಿಮ್ಮ ಕಾಮೆಂಟ್ ಬರೆಯಿರಿ

advertisement