ರಾಯಚೂರು ವಿವಿ ಕ್ಯಾಂಪಸ್‌ ನಿರ್ಮಾಣಕ್ಕೆ ೬೦೦ ಕೋಟಿ ರೂ. ಬೇಡಿಕೆ

posted in: ರಾಜ್ಯ | 0

ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ರಾಯಚೂರು ವಿಶ್ವವಿದ್ಯಾಲಯ ಸಮಗ್ರ ಕ್ಯಾಂಪಸ್‌ ನಿರ್ಮಾಣಕ್ಕಾಗಿ ರಾಜ್ಯ ಸರಕಾರದಿಂದ ೬೦೦ ಕೋಟಿ ರೂ. ಅನುದಾನ ಕೋರಿ ಬೇಡಿಕೆ ಸಲ್ಲಿಸಲಾಗಿದೆ ಎಂದು ಕುಲಪತಿ ಪ್ರೊ. ಹರೀಶ ರಾಮಸ್ವಾಮಿ ಹೇಳಿದರು.
ಕ್ಯಾಂಪಸ್‌ ನಿರ್ಮಾಣದ ಯೋಜನೆಗಳ ಬಗ್ಗೆ ಅಧಿಕಾರಿಗಳಿಂದ ಹಾಗೂ ಜನಪ್ರತಿನಿಧಿಗಳಿಂದ ಸಕಾರಾತ್ಮಕ ಸ್ಪಂದನೆ ದೊರೆತಿದೆ. ಕುಲಪತಿಯಾಗಿ ನೇಮಕಗೊಂಡ ೧೦೦ ದಿನಗಳಲ್ಲಿ ಸಾಕಷ್ಟು ಕೆಲಸಗಳಾಗಿವೆ. ಎಲ್ಲರಿಂದ ಸಲಹೆ ಪಡೆದು ಮಾದರಿ ಕ್ಯಾಂಪಸ್‌ ಮಾಡಲಾಗುವುದು ಎಂದರು.
ಈ ವರ್ಷ ಕೊರೊನಾ ಕಾರಣದಿಂದ ಕನಿಷ್ಟ ೧೦೦ ಕೋಟಿ ರೂ. ಅನುದಾನ ಮಾತ್ರ ದೊರೆಯುವ ಸಾಧ್ಯತೆಯಿದೆ. ಅದರಲ್ಲಿ ಆಡಳಿತ ಭವನ, ವರ್ಗ ಕೊಠಡಿಗಳು, ವಸತಿ ಗೃಹಗಳು, ತಾತ್ಕಾಲಿಕ ನೇಮಕಾತಿ ಮಾಡಿಕೊಳ್ಳುವ ಸಾಧ್ಯತೆಯಿದೆ. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ, ಆರ್‌ಟಿಪಿಎಸ್‌ನಿಂದ ಕೂಡ ಸಹಕಾರ ಕೋರಲಾಗಿದೆ. ಬಯೋ ಮೆಡಿಕಲ್‌ ರಿಸರ್ಚ್‌ ಸೆಂಟರ್‌ ಆರಂಭಿಸಲು ೭ ಕೋಟಿ ರೂ. ಅನುದಾನವನ್ನು ಅಭಿವೃದ್ಧಿ ಮಂಡಳಿಯಿಂದ ಕೋರಲಾಗಿದೆ ಎಂದು ತಿಳಿಸಿದರು.
ಗುಲಬರ್ಗಾ ವಿಶ್ವವಿದ್ಯಾಲಯದಿಂದ ಅಗತ್ಯ ಸಹಕಾರ ಸಿಗುತ್ತಿದ್ದು, ಈಗಾಗಲೇ ಪ್ರತ್ಯೇಕ ಹಣಕಾಸು ಖಾತೆ ನಿರ್ವಹಣೆ ಆರಂಭಿಸುವುದಕ್ಕೆ ಒಪ್ಪಿಗೆ ಸಿಕ್ಕಿದೆ. ಈ ಹಿಂದೆ ರಾಜ್ಯ ಸರಕಾರ ರಾಯಚೂರು ವಿಶ್ವವಿದ್ಯಾಲಯ ನಿರ್ಮಾಣಕ್ಕಾಗಿ ಗುಲಬರ್ಗಾ ವಿಶ್ವವಿದ್ಯಾಲಯಕ್ಕೆ ನೀಡಿದ್ದ ೨೪ ಕೋಟಿ ಅನುದಾನವನ್ನು ಗುಲಬರ್ಗಾ ವಿಶ್ವವಿದ್ಯಾಲಯದವರು ನಮಗೆ ನೀಡುತ್ತಿದ್ದಾರೆ. ಮುಂದಿನ ಶೈಕ್ಷಣಿಕ ವರ್ಷದಿಂದ ರಾಯಚೂರು ವಿಶ್ವವಿದ್ಯಾಲಯದಿಂದ ೨೫ ಕೋರ್ಸ್‌ ಆರಂಭಿಸಲಾಗುವುದು ಎಂದರು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಕಾರಿನಲ್ಲಿ ಕರೆದೊಯ್ದು ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆಗೈದ ತಂದೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement