ಹೆಚ್ಚುವರಿ ಕಾವೇರಿ ನೀರಿನ ಬಳಕೆ ತಮಿಳುನಾಡು ಯೋಜನೆ ಖಂಡಿಸಿ ಕೇಂದ್ರಕ್ಕೆ ಪತ್ರ ಬರೆದ ಬಿಎಸ್‌ವೈ

ಬೆಂಗಳೂರು: ಕಾವೇರಿಯಿಂದ ವಾಯ್‌ಗೈ ಮತ್ತು ಗುಂಡಾರ್‌ಗೆ ಕಾಲುವೆ ನಿರ್ಮಾಣದೊಂದಿಗೆ ನದಿ ಸಂಪರ್ಕಿಸುವ ಯೋಜನೆಯನ್ನು ಕೈಗೆತ್ತಿಕೊಳ್ಳುವ ಮೂಲಕ ಹೆಚ್ಚುವರಿ ಕಾವೇರಿ ನೀರನ್ನು ಬಳಸಲು ತಮಿಳುನಾಡಿಗೆ ಅವಕಾಶ ನೀಡಬಾರದು ಎಂದು ಕರ್ನಾಟಕ ಮುಖ್ಯಮಂತ್ರಿ ಯಡಿಯೂರಪ್ಪ ಕೇಂದ್ರ ಸರಕಾರಕ್ಕೆ ಪತ್ರ ಬರೆದಿದ್ದಾರೆ.
ಕರ್ನಾಟಕ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಮತ್ತು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ್ ಬೊಮ್ಮಾಯಿ ಅವರು ಶುಕ್ರವಾರ ಹಿರಿಯ ಅಧಿಕಾರಿಗಳು ಮತ್ತು ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ಸೇರಿದಂತೆ ಕಾನೂನು ತಜ್ಞರೊಂದಿಗೆ ಸಭೆ ನಡೆಸಿ ಅಂತರರಾಜ್ಯ ನದಿ ನೀರಿನ ವಿವಾದದ ಬಗ್ಗೆ ಚರ್ಚಿಸಿದರು. ಈ ಕುರಿತು ಯಡಿಯೂರಪ್ಪ ಮಾತನಾಡಿ, ತಮಿಳುನಾಡು ಯೋಜನೆಗೆ ಹೆಚ್ಚುವರಿ ೪೫ ಟಿಎಂಸಿ ನೀರನ್ನು ಬಳಸಿಕೊಳ್ಳಲು ಅವಕಾಶ ನೀಡುವುದಿಲ್ಲ. ಈ ಕುರಿತು ಕೇಂದ್ರ ಸರಕಾರಕ್ಕೆ ಪತ್ರ ಬರೆಯಲಾಗಿದೆ. ಅಲ್ಲದೇ ತಮಿಳುನಾಡಿನ ಕ್ರಮವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುವುದು ಎಂದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement