ಕಾವೇರಿ ಹೆಚ್ಚುವರಿ ನೀರು ಬಳಕೆಗೆ ತಮಿಳುನಾಡು ಹೊಸ ಯೋಜನೆ: ಬೊಮ್ಮಾಯಿ ಖಂಡನೆ

posted in: ರಾಜ್ಯ | 0

ಕಾವೇರಿ ನದಿಯ ಹೆಚ್ಚುವರಿ ನೀರು ಹಂಚಿಕೆಯಾಗದಿದ್ದರೂ ಅದರ ಬಳಕೆಗೆ ತಮಿಳುನಾಡು ಯೋಜನೆ ರೂಪಿಸಿರುವುದು ಖಂಡನೀಯ ಎಂದು ಕರ್ನಾಟಕದ ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ತಮಿಳುನಾಡು ಸರಕಾರದ ಯೋಜನೆಯಿಂದ ರಾಜ್ಯದ ಹಿತಾಸಕ್ತಿಗೆ ಧಕ್ಕೆಯಾಗಲಿದೆ. ತಮಿಳುನಾಡು ಸರಕಾರ ಕಾವೇರಿ ನದಿಯ ಹೆಚ್ಚುವರಿ ೪೫ ಟಿಎಂಸಿ ನೀರು ಬಳಕೆಯ ಯೋಜನೆಗೆ ಅಡಿಗಲ್ಲು ಹಾಕಿದೆ. ಮುಂದೆ ರಾಜ್ಯ ಯಾವ ಕ್ರಮ ಕೈಗೊಳ್ಳಬೇಕೆಂಬುದನ್ನು ಕಾನೂನು ತಜ್ಞರೊಂದಿಗೆ ಚರ್ಚಿಸಲಾಗುವುದು ಎಂದರು.
ತಮಿಳುನಾಡು ಯೋಜನೆಯನ್ನು ರಾಜ್ಯ ಸರ್ಕಾರ ಖಂಡಿಸುತ್ತದೆ. ಸ್ವಾತಂತ್ರ್ಯ ಪೂರ್ವದಿಂದಲೂ ತಮಿಳುನಾಡು ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಾ ಬಂದಿದೆ. ನಾವು ಕುಡಿಯುವ ನೀರಿನ ಯೋಜನೆ ಮಾಡುವಾಗ ವಿರೋಧಿಸಿದ ನೆರೆ ರಾಜ್ಯ ಈಗ ತಾನು ಯೋಜನೆ ಪ್ರಾರಂಭಿಸಿದೆ. ಈ ವಿಚಾರವಾಗಿ ಸುಪ್ರೀಂ ಕೋರ್ಟ್‌ನಲ್ಲಿ ಹೋರಾಡಲು ತೀರ್ಮಾನ ತೆಗೆದುಕೊಂಡಿದ್ದೇವೆ ಎಂದರು.
ಮಹದಾಯಿ ಯೋಜನೆ ಬಗ್ಗೆ ಗೋವಾ ಕ್ಯಾತೆ ತೆಗೆದ ಹಿನ್ನೆಲೆಯಲ್ಲಿ ಮೂರು ರಾಜ್ಯಗಳ ಪ್ರತಿನಿಧಿಗಳು ಪರಿಶೀಲನೆ ನಡೆಸಲಿದ್ದಾರೆ. ನದಿ ಪಾತ್ರ ಕೆಳಗಡೆ ಇದೆ, ಗೋಡೆ ಎತ್ತರದಲ್ಲಿದೆ. ನೀರು ಡೈವರ್ಟ್ ಆಗಲು ಸಾಧ್ಯವಿಲ್ಲ. ಸುಪ್ರೀಂ ಕೋರ್ಟ್ ಆದೇಶದ ರೀತಿ ರಾಜ್ಯ ನಡೆದುಕೊಳ್ಳುತ್ತಿದೆ. ಯಾವುದೇ ರೀತಿಯ ತಿರುವು ಮಾಡಿಲ್ಲ ಎಂದರು.
ಗೋವಾ ಮಹದಾಯಿ ಯೋಜನೆ ಮುಂದೂಡಲು ಈ ರೀತಿ ಮಾಡುತ್ತಿದೆ. ಪರಿಶೀಲನೆ ಆದ ತಕ್ಷಣವೇ ಯೋಜನೆಗೆ ಅವಕಾಶ ನೀಡಬೇಕು. ಕಾಮಗಾರಿಗೆ ಯಾವುದೇ ಅಡೆತಡೆ ಮಾಡದಂತೆ ತಿಳಿಸಿದ್ದೇವೆ. ಮಹದಾಯಿ ನಮ್ಮ ಪಾಲಿನ ನೀರನ್ನು ಬಳಸಲು ಎಲ್ಲಾ ಕ್ರಮ ತೆಗೆದುಕೊಳ್ಳುತ್ತೇವೆ. ಸುಪ್ರೀಂಕೋರ್ಟ್‌ನಲ್ಲಿ ಯಾವ ರೀತಿ ವಾದ ಮಾಡಬೇಕೆಂಬ ಬಗ್ಗೆಯೂ ಚರ್ಚೆ ನಡೆಸಿದ್ದೇವೆ ಎಂದು ತಿಳಿಸಿದರು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಚುನಾವಣೆ ಸನಿಹದಲ್ಲೇ ಬಿಜೆಪಿಯ ವಿಧಾನ ಪರಿಷತ್‌ ಸ್ಥಾನಕ್ಕೆ ಬಾಬುರಾವ್ ಚಿಂಚನಸೂರು ರಾಜೀನಾಮೆ : ಮುಂದಿನ ನಡೆ..?

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement