ಕೆಸ್ಸಾರ್ಟಿಸಿ ಪಾರ್ಸಲ್‌-‌ ಕಾರ್ಗೊ ಸೇವೆಗೆ ಸಿಎಂ ಬಿಎಸ್‌ವೈ ಚಾಲನೆ

posted in: ರಾಜ್ಯ | 0

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಪಾರ್ಸಲ್ ಕಾರ್ಗೊ ಸೇವೆ ಮತ್ತು ಕೆಎಸ್‍ಆರ್‍ಟಿಸಿ, ಕಿದ್ವಾಯಿ, ರೋಟರಿ ಸಹಯೋಗದೊಂದಿಗೆ ನಿರ್ಮಿಸಿರುವ ಮೊಬೈಲ್ ರಕ್ತದಾನದ ಬಸ್ಸನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಉದ್ಘಾಟಿಸಿದರು. ವಿಧಾನಸೌಧ ಮುಂಭಾಗ ನಡೆದ ಕಾರ್ಯಕ್ರಮದಲ್ಲಿ ಕಾರ್ಗೊ ಸೇವೆಗೆ ಚಾಲನೆ ನೀಡಿ ಮಾತನಾಡಿದ ಅವರು, ಕೋವಿಡ್‍ನಿಂದಾಗಿ ಸಾರಿಗೆ ಸಂಸ್ಥೆಗಳು ತೀವ್ರ ಸಂಕಷ್ಟದಲ್ಲಿದ್ದು, ಪರ್ಯಾಯ ಮಾರ್ಗದ ಆದಾಯ ಕಂಡುಕೊಂಡಿರುವುದು ಸಮಯೋಚಿತ ಎಂದರು.
ಸಾರಿಗೆಯೇತರ ಆದಾಯ ಕ್ರೋಢೀಕರಣಕ್ಕೆ ಹೆಚ್ಚಿನ ಗಮನಹರಿಸಬೇಕಾಗಿದೆ. ಈ ನಿಟ್ಟಿನಲ್ಲಿ ತಂದಿರುವ ಪಾರ್ಸಲ್ ಮತ್ತು ಕಾರ್ಗೊ ಸೇವೆ ಉತ್ತಮ ಸಾರ್ವಜನಿಕ ಸೇವೆ. ಕರ್ನಾಟಕ, ಗೋವಾ, ಮಹಾರಾಷ್ಟ್ರ,ಆಂಧ್ರಪ್ರದೇಶ, ತೆಲಂಗಾಣ, ಕೇರಳ ಮತ್ತು ತಮಿಳುನಾಡು ರಾಜ್ಯಗಳಿಗೆ ಕಾರ್ಗೊ ಸೇವೆ ಒದಗಿಸಲಾಗುತ್ತದೆ. ವಾರ್ಷಿಕ ಸುಮಾರು 80 ಕೋಟಿ ಆದಾಯ ಗಳಿಸುವ ನಿರೀಕ್ಷೆಯಿದೆ. ರಾಜ್ಯದ 88 ತಾಲ್ಲೂಕು ಬಸ್ ನಿಲ್ದಾಣ ಮತ್ತು ಅಂತಾರಾಜ್ಯದ 21 ಬಸ್ ನಿಲ್ದಾಣಗಳು ಸೇರಿದಂತೆ 109 ಬಸ್ ನಿಲ್ದಾಣಗಳಲ್ಲಿ ಈ ಸೇವೆ ದೊರೆಯಲಿವೆ. ಮುಂದಿನ ದಿನಗಳಲ್ಲಿ ಇತರೆ ಬಸ್ ನಿಲ್ದಾಣಗಳಿಗೂ ಈ ಸೇವೆಯನ್ನು ವಿಸ್ತರಿಸಲಾಗುವುದು. ಮನೆ ಬಾಗಿಲಿಗೆ ಸೇವೆ ವಿಸ್ತರಿಸುವ ಯೋಜನೆಯೂ ಇದೆ ಎಂದರು.
ಕೆಎಸ್‍ಆರ್‍ಟಿಸಿಯ ಹಳೆಯ ಹವಾನಿಯಂತ್ರಿತ ಬಸ್‍ಗಳನ್ನು ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಗೆ ಉಚಿತವಾಗಿ ನೀಡಲಾಗಿದ್ದು, ಕ್ಯಾನ್ಸರ್ ಬಗ್ಗೆ ಅರಿವು ಮೂಡಿಸಲಾಗುತ್ತದೆ. ಪ್ರಾಥಮಿಕ ಹಂತದಲ್ಲಿ ಕ್ಯಾನ್ಸರ್ ಗುರುತಿಸಲು ಈ ವಾಹನವನ್ನು ಉಪಯೋಗಿಸಲಾಗುತ್ತದೆ.

ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

advertisement
ಓದಿರಿ :-   ಹೈಕೋರ್ಟ್‌ ಮಹತ್ವದ ತೀರ್ಪು...: ಕರ್ನಾಟಕದ ಎಸಿಬಿಯನ್ನೇ ರದ್ದು ಪಡಿಸಿದ ಹೈಕೋರ್ಟ್, ಎಲ್ಲ ಪ್ರಕರಣಗಳನ್ನೂ ಲೋಕಾಯುಕ್ತಕ್ಕೆ ವರ್ಗಾಯಿಸಿ ಆದೇಶ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement