ರೈಲಿನಲ್ಲಿ ಸ್ಫೋಟಕಗಳನ್ನು ಸಾಗಿಸುತ್ತಿದ್ದ ತಮಿಳುನಾಡಿನ ಮಹಿಳೆಯನ್ನು ಪೊಲೀಸರು ಬಂದಿಸಿದ್ದಾರೆ.
ತಮಿಳುನಾಡು ಮೂಲದ ರಮಣಿ ಬಂಧಿತಳಾಗಿದ್ದು, ಅವಳ ಬಳಿ 100 ಜಿಲೆಟಿನ್ ಕಡ್ಡಿ ಹಾಗೂ 350 ಡಿಟೋನೇಟರ್ಗಳನ್ನು ಆರ್ಪಿಎಫ್ ಪೊಲೀಸರು ವಶ ಪಡಿಸಿಕೊಂಡಿದ್ದಾರೆ. ಮಹಿಳೆ ಚೆನ್ನೈ-ಮಂಗಳೂರು ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದಳು ಕೋಜಿಕ್ಕೋಡ್ ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ಪ್ರೊಟೆಕ್ಷನ್ ಫೋರ್ಸ್, ಆರ್ಪಿಎಫ್ ಪೊಲೀಸರು ಮಹಿಳೆಯಿಂದ ಭಾರೀ ಪ್ರಮಾಣದ ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಕಟ್ಟಾಡಿಯಿಂದ ತಲಚೇರಿಗೆ ಈ ಸ್ಫೋಟಕಗಳನ್ನು ಮಹಿಳೆ ತೆಗೆದುಕೊಂಡು ಹೋಗುತ್ತಿದ್ದಳು ಎಂದು ಗೊತ್ತಾಗಿದೆ.
ಮಹಿಳೆ ಜಿಲೆಟಿನ್ ಕಡ್ಡಿ ಹಾಗೂ ಡಿಟೋನೇಟರ್ಗಳನ್ನು ಯಾರಿಗೂ ತಿಳಿಯದಂತೆ ರೈಲಿನಲ್ಲಿ ಸೀಟಿನಡಿಯಲ್ಲಿ ಇಟ್ಟು ಸಾಗಿಸುತ್ತಿದ್ದಳು. ಅನುಮಾನದ ಮೇರೆಗೆ ತಪಾಸಣೆ ನಡೆಸಿದ ಪೊಲೀಸರು ಮಹಿಳೆಯನ್ನು ಸ್ಫೋಟಕ ವಸ್ತುಗಳ ಸಮೇತ ವಶಕ್ಕೆ ಪಡೆದಿದ್ದಾರೆ.
ವಿಚಾರಣೆ ವೇಳೆ ಮಹಿಳೆ ಬಾವಿ ತೋಡಲು ಜಿಲೆಟಿನ್ ಕಟ್ಟಿಗಳನ್ನು ತೆಗೆದುಕೊಂಡು ಹೋಗುತ್ತಿರುವುದಾಗಿ ಮಹಿಳೆ ಹೇಳಿದ್ದಾಳೆ ಎಂದು ತಿಳಿದು ಬಂದಿದೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ