ಟಿಎಂಸಿಯದು ಇಬ್ಬಗೆಯ ನಿಲುವು: ಅಸಾದುದ್ದಿನ್‌ ಓವೈಸಿ ಆರೋಪ

ಹೈದರಾಬಾದ್:‌ ಚುನಾವಣಾ ರ್ಯಾಲಿ ಆಯೋಜಿಸಲು ಅನುಮತಿ ನೀಡದ ಪಶ್ಚಿಮ ಬಂಗಾಳದ ಸರಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಎಐಐಎಂ ಮುಖ್ಯಸ್ಥ ಅಸಾದುದ್ದಿನ್‌ ಓವೈಸಿ, ತೃಣಮೂಲ ಕಾಂಗ್ರೆಸ್‌ನದು ಇಬ್ಬಗೆಯ ನಿಲುವು ಎಂದು ಜರಿದಿದ್ದಾರೆ.
ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಮಾತನಾಡಿದ್ದ ಟಿಎಂಸಿ ಮುಖಂಡರು ಈಗ ನಮ್ಮ ಪಕ್ಷಕ್ಕೆ ರ್ಯಾಲಿ ನಡೆಸಲು ಅನುಮತಿ ನೀಡದೇ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ವಿರೋಧ ಮಾಡುತ್ತಿದ್ದಾರೆ. ಇದು ಅವರ ಬೂಟಾಟಿಕೆಯನ್ನು ಪ್ರದರ್ಶಿಸುತ್ತದೆ. ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುವ ಟಿಎಂಸಿ ನಮ್ಮ ದೃಷ್ಟಿಕೋನವನ್ನು ಜನರಿಗೆ ತಿಳಿಸಲು ಎಂಐಐಎಂ ಪಕ್ಷಕ್ಕೆ ಅವಕಾಶ ನೀಡದಿರುವುದು ದುರದೃಷ್ಟಕರ ಎಂದರು.
ನಾನು ಗುಜರಾತ್‌ನಲ್ಲಿ ನರೇಂದ್ರ ಮೋದಿ, ಅಮಿತ್ ಶಾ, ಬಿಜೆಪಿ ಮತ್ತು ಆರ್‌ಎಸ್‌ಎಸ್ ವಿರುದ್ಧ ಮಾತನಾಡಬಲ್ಲೆ, ನಾನು ಅದನ್ನು ಬಂಗಾಳದಲ್ಲಿ ಮಾಡಲು ಏಕೆ ಸಾಧ್ಯವಿಲ್ಲ ಎಂದು ಅವರು ಪ್ರಶ್ನಿಸಿದರು. ಅನುಮತಿ ನಿರಾಕರಣೆಗೆ ಕಾರಣವಾದ ಎಲ್ಲಾ ಪೊಲೀಸ್ ಅಧಿಕಾರಿಗಳನ್ನು ವರ್ಗಾಯಿಸಲು ಇಸಿಗೆ ದೂರು ನೀಡುವುದಾಗಿ ಹೇಳಿದರು.
ಟಿಎಂಸಿ ಸರ್ಕಾರ ಚುನಾವಣಾ ಆಯೋಗಕ್ಕೆ ದೂರು ನೀಡಲು ನಮ್ಮನ್ನು ಒತ್ತಾಯಿಸುತ್ತಿದೆ. ಆದರೆ ಅಂಥ ಅಧಿಕಾರಿಗಳನ್ನು ನಿಯೋಜಿಸಿದರೆ ಚುನಾವಣೆಗಳು ಮುಕ್ತ ಮತ್ತು ನ್ಯಾಯಯುತವಾಗಿರುವುದಿಲ್ಲ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಎಂದು ಹೇಳಿದರು.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಇಂದಿನ ಪ್ರಮುಖ ಸುದ್ದಿ :-   "ನಿಮಗೆ ನಾಚಿಕೆಯಾಗಬೇಕು, ನಿಮ್ಮ ವರ್ತನೆಗೆ ನಾನು ಕ್ಷಮೆಯಾಚಿಸ್ತೇನೆ : 'ಕಾಶ್ಮೀರ ಫೈಲ್ಸ್' ಬಗ್ಗೆ ಇಸ್ರೇಲಿ ಚಲನಚಿತ್ರ ನಿರ್ಮಾಪಕನ ಟೀಕೆಗಳಿಗೆ ಇಸ್ರೇಲಿ ರಾಯಭಾರಿ ತೀವ್ರ ವಾಗ್ದಾಳಿ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

/ 5. ಒಟ್ಟು ವೋಟುಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement