ತುಮಕೂರು:ಬಿಜೆಪಿ ಹಾಗೂ ಕಾಂಗ್ರೆಸ್ ಜೊತೆ ಜೆಡಿಎಸ್‌ನ ಸಂಗೀತ ಖುರ್ಚಿ ಆಟ ಮುಂದುವರಿದೆ. ಎರಡು ದಿನಗಳ ಹಿಂದೇ ಮೈಸೂರು ಮಹಾನಗರ ಪಾಲಿಕೆಯಲ್ಲಿ ಮೇಯರ್ ಹಾಗೂ ಉಪಮೇಯರ್ ಆಯ್ಕೆ ವಿಚಾರದಲ್ಲಿ ಅಚ್ಚರಿಯ ಬೆಳವಣಿಗೆಯಲ್ಲಿ ಕಾಂಗ್ರೆಸ್ ಜೊತೆ ಕೈಜೋಡಿಸಿ ಬಿಜೆಪಿಗೆ ಶಾಕ್ ನೀಡಿದ್ದ ಜೆಡಿಎಸ್ ಶುಕ್ರವಾರ ತುಮಕೂರು ಪಾಲಿಕೆಯಲ್ಲಿ ಬಿಜೆಪಿಯೊಂದಿಗೆ ಕೈಜೋಡಿಸಿ ಮತ್ತೆ ಕಾಂಗ್ರೆಸ್‌ಗೆ ಶಾಕ್ ನೀಡಿದೆ..!!
ಮೇಯರ್ ಹಾಗೂ ಉಪಮೇಯರ್ ಚುನಾವಣೆಯಲ್ಲಿ ತುಮಕೂರಿನಲ್ಲಿ ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಂಡ ಪರಿಣಾಮ ಬಿಜೆಪಿಯ ಬಿ.ಜಿ.ಕೃಷ್ಣಪ್ಪ ಮೇಯರ್ ಆಗಿ ಆಯ್ಕೆಯಾಗಿದ್ದು, ಜೆಡಿಎಸ್‌ನ ಮಹಿಳೆ ನಾಜಿಮಾ ಬಿ. ಉಪಮೇಯರ್ ಆಗಿ ಆಯ್ಕೆಯಾಗಿದ್ದಾರೆ.ತುಮಕೂರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿ, ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಬಹುತೇಕ ಸಮಬಲ ಹೊಂದಿದ್ದವು. ಯಾರೂ ಯಾವ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡರೂ ಅವರಿಗೆ ಮೇಯರ್-ಉಪಮೇಯರ್ ಸ್ಥಾನ ಲಭಿಸುವುದು ಖಚಿತವಾಗಿತ್ತು. ಆದರೆ, ಮೇಯರ್ ಸ್ಥಾನವನ್ನು ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿರಿಸಿರುವುದರಿಂದ ಜೆಡಿಎಸ್ ಮತ್ತು ಕಾಂಗ್ರೆಸ್‍ನಲ್ಲಿ ಎಸ್‍ಟಿ ಅಭ್ಯರ್ಥಿ ಇಲ್ಲದೆ ಇರುವ ಕಾರಣ ಮೇಯರ್ ಸ್ಥಾನ ಬಿಜೆಪಿ ಮನೆ ಬಾಗಿಲಿಗೆ ಹುಡುಕಿಕೊಂಡು ಬಂದಂತಾಗಿದೆ.ಮೇಯರ್ ಸ್ಥಾನವನ್ನು ಎಸ್‍ಟಿಗೆ ಮೀಸಲಿಟ್ಟ ಸರ್ಕಾರದ ವಿರುದ್ಧ ಕಾಂಗ್ರೆಸ್ ಮತ್ತು ಜೆಡಿಎಸ್‍ನವರು ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ, ಅರ್ಜಿಯನ್ನು ಪರಿಶೀಲಿಸಿದ ಹೈಕೋರ್ಟ್ ತೀರ್ಪು ಕಾಯ್ದಿರಿಸಿ ನಿಗದಿಯಂತೆ ಮೇಯರ್-ಉಪಮೇಯರ್ ಚುನಾವಣೆ ನಡೆಸಲು ಹಸಿರು ನಿಶಾನೆ ತೋರಿರುವುದರಿಂದ ಶುಕ್ರವಾರ ಮೇಯರ್ ಸ್ಥಾನಕ್ಕೆ ಚುನಾವಣೆ ನಡೆಯಿತು.
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ