ನಾಲ್ಕು ವಾರದಲ್ಲಿ  ಸ್ಫೋಟಕ ವಸ್ತು ಹಿಂತಿರುಗಿಸದಿದ್ದರೆ ಲೈಸೆನ್ಸ್ ರದ್ದು 

ರಾಯಚೂರು, ( ಹಟ್ಟಿ ಚಿನ್ನದ ಗಣಿ): ಕಲ್ಲುಕ್ವಾರಿ ಮತ್ತು ಗಣಿಗಾರಿಕೆ ಪ್ರದೇಶಗಳಲ್ಲಿ ಯಾರಾದರೂ ಕಾನೂನು ಬಾಹಿರವಾಗಿ ಸ್ಫೋಟಕ ವಸ್ತುಗಳನ್ನು ಸಂಗ್ರಹಿಸಿಟ್ಟುಕೊಂಡಿದ್ದರೆ, ನಾಲ್ಕು ವಾರದೊಳಗೆ ಹಿಂತಿರಿಗಿಸಬೇಕು.ಇಲ್ಲದಿದ್ದರೆ ಅಂತಹವರ ಲೈಸೆನ್ಸ್ ( ಪರವನಾಗಿ)ಯನ್ನು ರದ್ದುಪಡಿಸಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ಆರ್. ನಿರಾಣಿ ಎಚ್ಚರಿಕೆ ನೀಡಿದ್ದಾರೆ.
ರಾಯಚೂರು ಜಿಲ್ಲೆಯ ಲಿಂಗಸೂರು ತಾಲ್ಲೂಕಿನ ಹಟ್ಟಿ ಚಿನ್ನದ ಗಣಿ ಪ್ರದೇಶಕ್ಕೆ ಇಂದು ಭೇಟಿ ನೀಡಿ ನಂತರ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನ ಸಭೆ ನಡೆಸಿ, ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.
ನಾಲ್ಕು ವಾರದ ನಂತರ ಸ್ಪೋಟಕ ವಸ್ತುಗಳನ್ನು ಇಲಾಖೆಗೆ ವಶಪಡಿಸಲು ಸೂಚಿಸಲಾಗಿದೆ.ಬಳಿಕವೂ ಕಂಡುಬಂದರೆ,ಅಂತಹಗಣಿ ಗುತ್ತಿಗೆ ರದ್ದು ಮಾಡಲಾಗುವುದು ಎಂದು ಹೇಳಿದರು. ಹಟ್ಟಿ ಚಿನ್ನದ ಗಣಿ ೧೭೦೦ ಕೆಜಿ ಚಿನ್ನ ಉತ್ಪಾದನೆಯಾಗಿದೆ. ಗಣಿಯನ್ನು ಅಧುನಿಕರಣಗೊಳಿಸಲು ಚಿಂತನೆ ನಡೆಸಲಾಗಿದೆ.ಈಗಾಗಲೇ ಅಧುನಿಕರಣಕ್ಕೆ ವರದಿ ತಯಾರಿಸಲಾಗಿದೆ ಎಂದು ತಿಳಿಸಿದರು.
ಕೊವಿಡ್ ಸಂದರ್ಭದಲ್ಲಿ ಚಿನ್ನ ಉತ್ಪಾದನೆಗೆ ಕಡಿತವಾಗಿತ್ತು.ಈಗ ಉತ್ತಮವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಅಕ್ರಮ ಗಣಿಗಾರಿಕೆಯಲ್ಲಿ ಅಧಿಕಾರಿಗಳ ಬೇಜವಾಬ್ದಾರಿತನದ ಬಗ್ಗೆ ಪದೇ ಪದೇ ಕೇಳಿ ಬರುತ್ತಿದೆ.ಮುಂದೆ ಇಂತಹ ದೂರುಗಳು ಕೇಳಿ ಬಂದರೆ, ಅಂತಹವರ ಮೇಲೆ ನಿರ್ದಾಕ್ಷಿಣ್ಯವಾಗಿ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಮಹಿಳಾ ಕುಸ್ತಿಪಟುಗಳ ಅನುಚಿತ ಸ್ಪರ್ಶ, ಲೈಂಗಿಕ ಫೇವರ್‌ ಕೇಳಿದ ಡಬ್ಲ್ಯುಎಫ್‌ಐ ಮುಖ್ಯಸ್ಥ : 2 ಎಫ್‌ಐಆರ್‌ಗಳು, 10 ದೂರುಗಳು

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

2 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement