ಭಾರತದ ಆರೋಗ್ಯ ಪರಿಸರ ವ್ಯವಸ್ಥೆಯನ್ನು ಜಗತ್ತು ಹೊಸ ದೃಷ್ಟಿಕೋನದಿಂದ ನೋಡುತ್ತಿದೆ: ಪ್ರಧಾನಿ ಮೋದಿ

ಭಾರತೀಯ ಆರೋಗ್ಯ ಪರಿಸರ ವ್ಯವಸ್ಥೆಯನ್ನು ಹೊಸ ದೃಷ್ಟಿಕೋನ, ಗೌರವ ಮತ್ತು ಹೊಸ ವಿಶ್ವಾಸಾರ್ಹತೆಯಿಂದ ನೋಡಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಅ
ಅವರು ಎಂಜಿಆರ್‌ ವೈದ್ಯಕೀಯ ವಿಶ್ವವಿದ್ಯಾಲಯದ ೩೩ನೇ ಘಟಿಕೋತ್ಸವ ಉದ್ಘಾಟಿಸಿ ಮಾತನಾಡಿದರು. ಕೊರೊನಾ ರೋಗದ ವಿರುದ್ಧದ ಹೋರಾಟದಲ್ಲಿ ನೆರೆಯ ರಾಷ್ಟ್ರಗಳಿಗೆ ನೆರವು ನೀಡುವಲ್ಲಿ ಭಾರತದ ಪ್ರಯತ್ನ ಶ್ಲಾಘನೀಯವಾಗಿದೆ ಎಂದರು.
ಭಾರತವು ಕೇವಲ ಹೊಸ ಹಾದಿಯನ್ನು ರೂಪಿಸಿಲ್ಲ ಇದರೊಂದಿಗೆ ಇತರರಿಗೂ ಸಹಾಯ ಮಾಡಿದೆ. ಪ್ರಸ್ತುತ ಭಾರತ ಕಡಿಮೆ ಸಾವಿನ ಪ್ರಮಾಣ ಮತ್ತು ಹೆಚ್ಚಿನ ಚೇತರಿಕೆ ಪ್ರಮಾಣವನ್ನು ಹೊಂದಿರುವ ದೇಶಗಳಲ್ಲಿ ಒಂದಾಗಿದೆ. ಜಗತ್ತು ನಿಮ್ಮಿಂದ ಹೆಚ್ಚಿನ ನಿರೀಕ್ಷೆಗಳನ್ನು ಹೊಂದಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಪಿಎಂ ಮೋದಿ ಅವರು ಪದವಿ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಿದರು ಪರೀಕ್ಷೆಗಳಲ್ಲಿ ಮಾರ್ಕ್ಸ್‌ ಗಳಿಸುವುದರೊಂದಿಗೆ ಸಮಾಜದಲ್ಲಿ ನಿಮ್ಮ ಮಾರ್ಕ್‌ (ಛಾಪು) ಮೂಡಿಸಬೇಕಿದೆ. ಪದವಿ ಪಡೆದ ಒಟ್ಟು ವಿದ್ಯಾರ್ಥಿಗಳಲ್ಲಿ 70% ಮಹಿಳೆಯರು ಎಂಬುದು ಸಂತಸದ ಸಂಗತಿ ಎಂದರಲ್ಲದೇ ಮಹಿಳಾ ಅಭ್ಯರ್ಥಿಗೆ ನನ್ನ ವಿಶೇಷ ಮೆಚ್ಚುಗೆಯನ್ನು ತಿಳಿಸುತ್ತೇನೆ. ಪ್ರತಿ ಕ್ಷೇತ್ರದಲ್ಲಿ ಮಹಿಳೆಯರು ಮುನ್ನಗ್ಗುತ್ತಿರುವುದು ವಿಶೇಷ ಸಂಗತಿ ಎಂದರು.

advertisement

ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/
ಓದಿರಿ :-   ಸಾಮಾಜಿಕ-ಡಿಜಿಟಲ್ ಮಾಧ್ಯಮಗಳಿಗೆ ನಿಯಂತ್ರಣಕ್ಕೆ ಕಾನೂನು ಬೇಕು: ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

advertisement

ನಿಮ್ಮ ಕಾಮೆಂಟ್ ಬರೆಯಿರಿ