ಮಹಿಳಾ ಐಪಿಎಸ್ ಅಧಿಕಾರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಡಿಜಿಪಿ ಮಟ್ಟದ ಹಿರಿಯ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ ಎಂದು ವರದಿಯಾಗಿದೆ. ತಮಿಳುನಾಡಿನ ವಿಶೇಷ ಪೊಲೀಸ್ ಮಹಾನಿರ್ದೇಶಕ ರಾಜೇಶ್ ದಾಸ್ ಅಮಾನತುಗೊಂಡ ಅಧಿಕಾರಿ.
ಮುಖ್ಯಮಂತ್ರಿ ಪಳನಿಸ್ವಾಮಿ ಅವರ ಕಾರ್ಯಕ್ರಮದ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಮಹಿಳಾ ಐಪಿಎಸ್ ಅಧಿಕಾರಿಯನ್ನು ವಿಶೇಷ ಡಿಜಿಪಿ ರಾಜೇಶ್‍ದಾಸ್ ಅವರು ತಮ್ಮ ಕಾರಿನಲ್ಲಿ ಕೂರಿಸಿಕೊಂಡು ಕಿರುಕುಳ ನೀಡುವ ಪ್ರಯತ್ನ ಮಾಡಿದ್ದರು ಎಂದು ಆಕೆ ದೂರು ನೀಡಿದ್ದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಮಹಿಳಾ ಅಧಿಕಾರಿ ಫೆ.22ರಂದು ಲಿಖಿತ ದೂರು ಸಲ್ಲಿಸಿದ್ದರು. ಫೆ.24ರಂದು ಅದು ತಮಿಳುನಾಡಿನ ಗೃಹ ಕಾರ್ಯದರ್ಶಿ ಅವರಿಗೆ ರವಾನೆಯಾಗಿತ್ತು. ಆರೋಪದ ಬಗ್ಗೆ ತನಿಖೆ ನಡೆಸಲು ಹೆಚ್ಚುವರಿ ಮುಖ್ಯಕಾರ್ಯದರ್ಶಿ ಜಯಶ್ರೀ ರಘುನಂದನ್ ಅವರ ಅಧ್ಯಕ್ಷತೆಯಲ್ಲಿ ಅಂತಾರಾಷ್ಟ್ರೀಯ ನ್ಯಾಯಕೋಶದ ಲೊರೆಟಾಜಾನ್ ಅವರನ್ನೊಳಗೊಂಡಂತೆ ತನಿಖಾ ಆಯೋಗವನ್ನು ರಚನೆ ಮಾಡಲಾಗಿದೆ.
ಆ
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ