ಬೆಂಗಳೂರು: ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಬಸ್ ಪಾಸ್ ಪಡೆಯಲು ಮಾರ್ಚ್ 31ರ ವರೆಗೆ ಕಾಲಾವಕಾಶ ವಿಸ್ತರಣೆ ಮಾಡಲಾಗಿದೆ.
ಈ ಕುರಿತು ಪ್ರಕಟಣೆ ಬಿಡುಗಡೆ ಮಾಡಿದ್ದು, ಪ್ರಸ್ತುತ ಶಾಲಾ-ಕಾಲೇಜು ಪುನರಾರಂಭದ ಹಿನ್ನೆಲೆಯಲ್ಲಿ ಸಾರಿಗೆ ನಿಗಮಗಳ ಬಸ್ಸುಗಳಲ್ಲಿ ವಿದ್ಯಾರ್ಥಿಗಳಿಗೆ 2019-20ನೇ ಸಾಲಿನ ಪಾಸಿನ ಆಧಾರದಲ್ಲಿಯೇ ಪ್ರಯಾಣಿಸಲು ಫೆ.28ರ ವರೆಗೆ ಅವಕಾಶ ನೀಡಲಾಗಿತ್ತು. ಇದೀಗ ಪಾಸುಗಳನ್ನು ಪಡೆಯಲು ವಿದ್ಯಾರ್ಥಿಗಳಿಗೆ ಮತ್ತಷ್ಟು ಕಾಲಾವಕಾಶ ನೀಡುವ ಸಲುವಾಗಿ ವಿದ್ಯಾರ್ಥಿಗಳು ಕಳೆದ ವರ್ಷದ ಬಸ್ ಪಾಸ್ ನೊಂದಿಗೆ ಪ್ರಸ್ತುತ ಸಾಲಿನ ಶಾಲಾ-ಕಾಲೇಜುಗಳಿಗೆ ಶುಲ್ಕ ಪಾವತಿಸಿರುವುದರ ರಸೀದಿಯನ್ನು ತೋರಿಸಿದರೆ ಮಾರ್ಚ್ 31ರ ವರೆಗೆ ಸಾರಿಗೆ ನಿಗಮಗಳ ಬಸ್ ಗಳಲ್ಲಿ ಸಂಚರಿಸಲು ಅವಕಾಶ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
advertisement
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ | |
ವಾಟ್ಸಾಪ್ ಗ್ರೂಪ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ