ಅಕ್ರಮ ಜಿಲೆಟಿನ್‌: ಬೆಳಗಾವಿ ಜಿಲ್ಲೆಯಲ್ಲಿ ಐವರ ಬಂಧನ

posted in: ರಾಜ್ಯ | 0

ಬೆಳಗಾವಿ: ಅಕ್ರಮವಾಗಿ ಜಿಲೆಟಿನ್ ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಜಿಲ್ಲೆ ಗೋಕಾಕ್ ತಾಲೂಕಿನ ಹೊನಕಟ್ಟಿ ಗ್ರಾಮದಲ್ಲಿ ಬಂಧಿಸಲಾಗಿದೆ.
ಬಂಧಿತರನ್ನು ಗೋಪಾಲ್ ಸೊರಗಾಂವಿ, ಗಿರಿಮಲ್ಲಪ್ಪ ಸಿದ್ಧಾಪುರ, ಭೀಮಪ್ಪ ಎಂದು ಗುರುತಿಸಲಾಗಿದ್ದು, ಇವರಿಂದ 156 ಜಿಲೆಟಿನ್ ಕಡ್ದಿ ಸೇರಿದಂತೆ ಹಲವು ಸ್ಫೋಟಕಗಳನ್ನು ವಶ ಪಡಿಸಿಕೊಳ್ಳಲಾಗಿದೆ.ಕುಲಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕೋಡಿ ತಾಲೂಕಿನ ಹತ್ತರವಾಟ ಗ್ರಾಮದ ಹೊರವಲಯದಲ್ಲಿ ಸ್ಫೋಟಗೊಳಿಸಲು ಜಿಲೆಟಿನ್ ಹಾಗೂ ಡಿಟೋನೇಟರ್ ಗಳನ್ನು ಸಂಗ್ರಹಿಸಿಟ್ಟಿದ್ದ ಇಬ್ಬರು ಆರೋಪಿಗಳನ್ನು ಚಿಕ್ಕೋಡಿ ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಘಟಪ್ರಭಾದ ಶಾಂತಿಲಾಲ್ ಗಣೇಶಲಾಲ್ ದುಗ್ಗರ ಹಾಗೂ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿಯ ತ್ಯಾಗರಾಜ್ ಸೋಮು ರಾಥೋಡ್ ಎಂದು ಗುರುತಿಸಲಾಗಿದೆ. ಬಂಧಿತರಿಂದ ಎಕ್ಸ್ ಪ್ಲೋಡರ್ 90 ಮೀಟರ್ ಉದ್ದದ ಪ್ಲಾಸ್ಟಿಕ್ ವಾಯರ್, ಸಣ್ಣ ವಯರ್ ತುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಹತ್ತರವಾಟ ಗ್ರಾಮದ ಕಲ್ಲಪ್ಪ ನಂಗಪ್ಪ ಸೂಜಿ ಮಾಲೀಕತ್ವದ ಬಾವಿಯಲ್ಲಿ ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿ ಜಿಲೆಟಿನ್ ಹಾಗೂ ಡಿಟೋನೇಟರ್ ಗಳನ್ನು ಸಂಗ್ರಹಿಸಿಡಲಾಗಿತ್ತು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಚಿಕ್ಕೋಡಿ ಪೊಲೀಸರು ದಾಳಿ ನಡೆಸಿದ್ದರು.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಇಂದಿನ ಪ್ರಮುಖ ಸುದ್ದಿ :-   ಕಾರ್ಯಕ್ರಮದ ವೇಳೆ ಕುಸಿದುಬಿದ್ದ ಸಾಹಿತಿ ಬರಗೂರು ರಾಮಚಂದ್ರಪ್ಪ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

/ 5. ಒಟ್ಟು ವೋಟುಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement